ವಿಶೇಷ ಸೂರ್ಯಗ್ರಹಣಕ್ಕೆ ಸಜ್ಜಾಗಿದೆ ಉತ್ತರ ಕನ್ನಡ

ಉತ್ತರ ಕನ್ನಡ : ಅಪರೂಪದ ಕಂಕಣ ಸೂರ್ಯಗ್ರಹಣವನ್ನ ಇಡೀ ವಿಶ್ವವೇ ಎದುರು ನೋಡುತ್ತಿದೆ. ಅದರಂತೆ ಜಿಲ್ಲೆಯಲ್ಲೂ ಕೂಡ ಸೂರ್ಯಗ್ರಹಣ ವೀಕ್ಷಣೆಗೆ ಜನ ಕಾಯುತ್ತಿದ್ದಾರೆ.

ಜಿಲ್ಲೆಯ ಪ್ರಮುಖ ದೇವಾಲಯಗಳಾದ ದಕ್ಷಿಣ ಕಾಶಿ ಗೋಕರ್ಣ, ಮುರುಡೇಶ್ವರ, ಇಡಗುಂಜಿ, ಧಾರೇಶ್ವರ ಹಾಗೂ ಶಿರಸಿ ಮಾರಿಕಾಂಬಾ ದೇವಾಲಯಗಳಲ್ಲಿ ಭಕ್ತರಿಗೆ ವಿಶೇಷ ಪೂಜಾ ಪುನಸ್ಕಾರಗಳಿಗೆ ಅವಕಾಶ ಮಾಡಿಕೊಡಲಾಗಿದ್ದು, ಪ್ರಸಾದ ಭೋಜನ ವ್ಯವಸ್ಥೆಯಲ್ಲಿ ವ್ಯತ್ಯಯಗಳಾಗಿವೆ. ಬೆಳಗಿನ ಉಪಹಾರದ ವ್ಯವಸ್ಥೆಯನ್ನ ರದ್ದುಗೊಳಿಸಲಾಗಿದ್ದು, ಮಧ್ಯಾಹ್ನ ಪ್ರಸಾದ ಭೋಜನ ವ್ಯವಸ್ಥೆಯನ್ನ 1.30 ರಿಂದ ಪ್ರಾರಂಭಿಸಲಾಗುತ್ತೆ.

About the author

Adyot

Leave a Comment