ಮೀನುಗಾರಿಕೆ ಹಾಗೂ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಕಾರವಾರದಲ್ಲಿ ಬುಧವಾರ ಸಾಗರಮಾಲ ಯೋಜನೆಯ ಎರಡನೇ ಹಂತದ ಕಾಮಗಾರಿಯ ಕುರಿತು ಮೀನುಗಾರರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದರು. ಅಲ್ಲದೆ ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹ ಕುರಿತು ಸಭೆ ನಡೆಸಿದರು. ಶಾಸಕಿ ರೂಪಾಯಿ ಎಸ್.ನಾಯ್ಕ, ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಕೆ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಬಂದರು ಅಧಿಕಾರಿ ಕ್ಯಾಪ್ಟನ್ ಸಿ.ಸ್ವಾಮಿ, ಮೀನುಗಾರ ಮುಖಂಡರಾದ ಗಣಪತಿ ಮಾಂಗ್ರೆ, ಗಣಪತಿ ಉಳ್ವೇಕರ್, ರಾಮಾನಂದ ಗಾಂವಕರ್ ಮತ್ತಿತರರು ಉಪಸ್ಥಿತರಿದ್ದರು.