ಪ್ರಗತಿ ಪರಿಶೀಲನಾ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಮಾಧುಸ್ವಾಮಿ

ಉತ್ತರ ಕನ್ನಡ : ಸಣ್ಣ ನೀರಾವರಿ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಕಾರವಾರದಲ್ಲಿ ಸಣ್ಣ ನೀರಾವರಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು.

ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತು ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿಗಳನ್ನ ಸಂಪೂರ್ಣ ಪರಿಶೀಲಿಸಿ ವಾರದೊಳಗೆ ವರದಿ ಸಲ್ಲಿಸಲು ಅಧೀಕ್ಷಕ ಎಂಜಿನಿಯರ್ ಗೆ ಸೂಚನೆ ನೀಡಿದರು. ಇದೆ ವೇಳೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸರಿಯಾದ ಮಾಹಿತಿ ನೀಡದ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ಕಾರವಾರ ಶಾಸಕಿ ರೂಪಾಲಿ ನಾಯ್ಕ್, ಜಿಲ್ಲಾಧಿಕಾರಿ ಡಾ.ಹರೀಶಕುಮಾರ್, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಮೃತ್ಯುಂಜಯ, ಮುಖ್ಯ ಎಂಜಿನಿಯರ್ ಜಿ.ಟಿ.ಸುರೇಶ್ ಉಪಸ್ಥಿತರಿದ್ದರು.

About the author

Adyot

Leave a Comment