ಆದ್ಯೋತ್ ನ್ಯೂಸ್ ಡೆಸ್ಕ್ :
ರಾಜ್ಯದಲ್ಲಿ ನೊವೆಲ್ ಕೊರೊನಾ ರೋಗದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ 1 ವಾರ ಕೊರೊನಾ ಎಮರ್ಜೆನ್ಸಿ ಘೋಷಣೆಯಾಗಿದೆ.
ಇಂದು ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜ್ಯದಲ್ಲಿ 1 ವಾರಗಳ ಕಾಲ ಎಲ್ಲಾ ಮಾಲ್ ಹಾಗೂ ಥಿಯೇಟರ್ ಗಳನ್ನು ಬಂದ್ ಮಾಡುವಂತೆ ಸೂಚಿಸಿದ್ದಾರೆ. ಅದೇ ರೀತಿಯಲ್ಲಿ 1 ವಾರಗಳ ಕಾಲ ಮದುವೆ, ನಾಮಕರಣ, ಎಂಗೇಜ್ಮೆಂಟ್ ಸೇರಿದಂತೆ ಕಾರ್ಯಕ್ರಮಗಳು, ಶಾಲಾ ಕಾಲೇಜುಗಳು, ನೈಟ್ ಕ್ಲಬ್, ಪಬ್ ಗಳು, ಎಲ್ಲಾ ವಿವಿಗಳು ಕೂಡ ಬಂದ್ ಆಗಲಿವೆ. ಆದರೆ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಐಟಿ ಕಂಪನಿಗಳಲ್ಲಿ ಕೆಲಸ ಮಾಡುವವರು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ. ಸರಳ ವಿವಾಹಗಳಿಗೆ ಅನುಮತಿ ನೀಡಲಾಗಿದೆ. ಸರ್ಕಾರಿ ಕಚೇರಿಗಳು ಎಂದಿನಂತೆ ಓಪನ್ ಇರಲಿದ್ದು, ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯೋದಿಲ್ಲ. ಎಲ್ಲಾ ಜಾತ್ರೆ ಹಾಗೂ ಉತ್ಸವಗಳೂ ಕೂಡ ಬಂದ್ ಆಗಲಿವೆ.