ಆದ್ಯೋತ್ ನ್ಯೂಸ್ ಡೆಸ್ಕ್ : ಮಾರ್ಚ್ 24 ರಿಂದ ಮಾರ್ಚ್ 30 ರವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಹರಡುತ್ತಿರೋ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದರೂ ಕೂಡ ಜನರು ಇದಕ್ಕೆ ಸ್ಪಂದಿಸುತ್ತಿಲ್ಲ. ತಹಶೀಲ್ದಾರ್ ಹಾಗೂ ಆರೋಗ್ಯಾಧಿಕಾರಿಗಳ ಮಾತಿಗೂ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿಲ್ಲ. ವಿದೇಶದಿಂದ ಅಗಮಿಸುತ್ತಿರೋ ಸ್ಥಳೀಯ ನಿವಾಸಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಗುಂಪು ಗುಂಪಾಗಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವುದು ಜಾಸ್ತಿಯಾಗುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸುವ ಅನಿವಾರ್ಯತೆ ಇರೋ ಕಾರಣ ಮಾರ್ಚ್ 24 ರಿಂದ ಮಾರ್ಚ್ 30 ರವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ ಅಂತ ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.