ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ನ್ಯೂಜಿಲೆಂಡ್ ನ ಸೆಡನ್ ಪಾರ್ಕ್ ನಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲುಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ತಂಡ ಶ್ರೇಯಸ್ ಅಯ್ಯರ್ ಅವರ ಶತಕ(103) ಹಾಗೂ ಕೆ.ಎಲ್ ರಾಹುಲ್(88), ವಿರಾಟ್ ಕೊಹ್ಲಿ(51) ರನ್ ಗಳ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 347 ರನ್ ಗಳಿಸಿತು. 348 ರನ್ ಗಳ ಬೃಹತ್ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ನ್ಯೂಜಿಲೆಂಡ್ ತಂಡ ರಾಸ್ ಟೇಲರ್ ಶತಕ(109) ಹಾಗೂ ನಿಕೋಲ್ಸ್(78), ಟಾಮ್ ಲೆಥಮ್(69) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 48.1 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಗೆಲುವಿನ ದಡ ತಲುಪಿತು. ಇದರೊಂದಿಗೆ 3 ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ 1-0 ರಲ್ಲಿ ಮುನ್ನಡೆ ಪಡೆಯಿತು.