ಹುಬ್ಬಳ್ಳಿ : ಹುಬ್ಬಳ್ಳಿಯ ಪ್ರತಿಷ್ಟಿತ ಕೆಎಲ್ ಇ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಮೂವರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ವಿಡಿಯೋವನ್ನ ವೈರಲ್ ಮಾಡಿದ ಘಟನೆ ನಡೆದಿದೆ.
ಕೆ.ಎಲ್.ಇ ಕಾಲೇಜಿನಲ್ಲಿ ಗವರ್ನಮೆಂಟ್ ಕೋಟಾದಲ್ಲಿ ದಾಖಲಾಗಿದ್ದ ಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ಅಮೀರ್, ಬಾಸೀತ್, ತಾಲೀಬ್ ಅನ್ನೋ 3 ಜನ ತಾಂತ್ರಿಕ ವಿದ್ಯಾಲಯದ ವಿದ್ಯಾರ್ಥಿಗಳಾಗಿದ್ದು, ಮೂವರು ಸಿವಿಲ್ ಇಂಜನಿಯರಿಂಗ್ ವಿಭಾಗದಲ್ಲಿ ಓದುತ್ತಿದ್ದಾರೆ. ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಘೋಷಣೆ ಕೂಗಿ ಅದನ್ನ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಇದನ್ನು ತಿಳಿದು ಸ್ಥಳಕ್ಕೆ ಪೋಲಿಸ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಕೇಸ್ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಭಜರಂಗದಳ ಆಗ್ರಹಿಸಿದೆ.
Really good job our police.