ನ್ಯೂಜಿಲೆಂಡ್ : ನ್ಯೂಜಿಲೆಂಡ್ ಹ್ಯಾಮಿಲ್ಟನ್ ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆದ 3ನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಭಾರತ ಆತಿಥೇಯ ನ್ಯೂಜಿಲೆಂಡ್ ತಂಡದ ವಿರುದ್ಧ ಸೂಪರ್ ಓವರ್ ಜಯಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ತಂಡ ರೋಹಿತ್ ಶರ್ಮಾ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿತು. 180 ರನ್ ಗಳ ಬೃಹತ್ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ನ್ಯೂಜಿಲೆಂಡ್ ತಂಡ ನಾಯಕ ಕೇನ್ ವಿಲಿಯಮ್ಸನ್ ಅವರ ಭರ್ಜರಿ 95 ರನ್ ಗಳ ನೆರವಿನಿಂದ ಜಯದ ಹಾದಿಯಲ್ಲಿ ಸಾಗುತ್ತಿತ್ತು. ಆದರೆ ಕೊನೆಯ ಓವರ್ ವರೆಗೆ ಸಾಗಿದ ಪಂದ್ಯದಲ್ಲಿ ನ್ಯೂಜಿಲೆಂಡ್ ಕೂಡ 5 ವಿಕೆಟ್ ಕಳೆದುಕೊಂಡು 178 ರನ್ ಗಳಿಸಿತು. ಇದರೊಂದಿಗೆ ಪಂದ್ಯ ಟೈ ಆಗಿ ಸೂಪರ್ ಓವರ್ ಕಡೆ ಎಲ್ಲರ ಗಮನ ಕೇಂದ್ರೀಕೃತವಾಯಿತು. ನಂತರ ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 17 ರನ್ ಗಳಿಸಿತು. 18 ರನ್ ಗಳ ಗುರಿ ಬೆನ್ನತ್ತಿದ ಭಾರತ ತಂಡ 20 ರನ್ ಗಳಿಸಿ ಜಯದ ನಗೆ ಬೀರಿತು. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಇನ್ನೂ 2 ಪಂದ್ಯ ಬಾಕಿ ಇರುವಂತೆಯೇ ಭಾರತ 3-0 ಸರಣಿ ಜಯಗಳಿಸಿತು.