ಆದ್ಯೋತ್ ಸ್ಪೋರ್ಟ್ಸ್ ಡೆಸ್ಕ್ : ನ್ಯೂಜಿಲೆಂಡ್ ನ ವೆಲ್ಲಿಂಗ್ಟನ್ ರೀಜನಲ್ ಸ್ಟೇಡಿಯಂ ನಲ್ಲಿ ನಡೆಯುತ್ತಿರೋ 4ನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಭಾರತ ಮತ್ತೊಮ್ಮೆ ಸೂಪರ್ ಓವರ್ ನಲ್ಲಿ ಜಯಗಳಿಸಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಭಾರತ ತಂಡ ನ್ಯೂಜಿಲೆಂಡ್ ಬೌಲರ್ ಗಳ ಎದುರು ತಿಣುಕಾಡಿತು. ಕನ್ನಡಿಗರಾದ ಕೆ.ಎಲ್ ರಾಹುಲ್ 38 ರನ್ ಹಾಗೂ ಮನೀಷ್ ಪಾಂಡೆಯವರ 50 ರನ್ ಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿತು. 166 ರನ್ ಗಳ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ನ್ಯೂಜಿಲೆಂಡ್ ತಂಡ ಕಾಲಿನ್ ಮನ್ರೋ ಹಾಗೂ ಟಿಮ್ ಸೈಫರ್ಟ್ಸ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 165 ರನ್ ಗಳಿಸುವುದರೊಂದಿಗೆ ಮತ್ತೆ ಪಂದ್ಯ ಟೈ ಆಯಿತು. ನಂತರ ನಡೆದ ಸೂಪರ್ ಓವರ್ ನಲ್ಲಿ ನ್ಯೂಜಿಲೆಂಡ್ ತಂಡ 13 ರನ್ ಗಳಿಸಿತು. 14 ರನ್ ಗಳ ಗುರಿ ಬೆನ್ನತ್ತಿದ ಭಾರತ ತಂಡ ಗೆಲುವಿನ ನಗೆ ಬೀರಿತು. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿ 4-0 ರಲ್ಲಿ ಭಾರತದ ಪಾಲಾಗಿದೆ.