ಆದ್ಯೋತ್ ಸುದ್ದಿ ನಿಧಿ : ರಾಜ್ಯದಲ್ಲಿ ಕೊರೊನಾ ಅತಿಯಾಗಿ ಹರಡುತ್ತಿದ್ದು, ಜಿಲ್ಲೆಯಲ್ಲಿ ಕೂಡ ತನ್ನ ಆರ್ಭಟವನ್ನ ಮುಂದುವರೆಸಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಇಂದು 5 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇಂದು ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಈ ಕುರಿತು ಅಧಿಕೃತ ಪ್ರಕಟಣೆ ಹೊರಬೀಳಲಿದೆ.
ಸಿದ್ದಾಪುರದ ಸರ್ಕಾರಿ ಆಸ್ಪತ್ರೆ ಇದೀಗ ಕೊರೊನಾ ಕೆಂಗಣ್ಣಿಗೆ ಗುರಿಯಾಗಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರಲ್ಲಿ ಹಾಗೂ ಸಹಾಯಕರೋರ್ವರಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡಿದೆ. ಇದು ಈಗ ತಾಲೂಕಿನ ಜನರ ನಿದ್ದೆಗೆಡಿಸಿದೆ. ಇನ್ನುಳಿದ 3 ಪ್ರಕರಣಗಳು ತಾಲೂಕಿನ ಗ್ರಾಮೀಣ ಹಾಗೂ ಪಟ್ಟಣ ಭಾಗಗಳಲ್ಲಿ ಕಾಣಿಸಿಕೊಂಡಿದ್ದು, ನಿಧಾನವಾಗಿ ಗ್ರಾಮೀಣ ಭಾಗಗಳತ್ತ ಕಾಲಿಡುತ್ತಿದೆ. ಇದೀಗ ಸೋಂಕಿತರ ಸಂಪರ್ಕವನ್ನು ಪತ್ತೆಹಚ್ಚುವುದು ಸವಾಲಿನ ಕೆಲಸವಾಗಿದೆ. ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯರು ಇದ್ದ ಮಹಡಿಯನ್ನು ಸೀಲ್ ಡೌನ್ ಮಾಡಲಾಗಿದ್ದು, ಹೊರರೋಗಿ ವಿಭಾಗವನ್ನ ಮುಚ್ಚಲಾಗುತ್ತಿದೆ. ಆಸ್ಪತ್ರೆಗೆ ಸ್ಯಾನಿಟೈಸೇಷನ್ ಮಾಡಲಾಗುತ್ತೆ. ಇನ್ನು ಗ್ರಾಮೀಣ ಭಾಗಗಳಿಗೂ ಕೊರೊನಾ ಹರಡುತ್ತಿದ್ದು, ಜನರು ಆದಷ್ಟು ಮನೆಯಿಂದ ಹೊರಬಾರದಿರುವುದು ಒಳ್ಳೆಯದು. ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯವಾಗಿ ಮಾಡಲೇಬೇಕಾಗಿದೆ.
Don’t open school and college and shield the all city