ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ 68 ನೇ ಪುಣ್ಯಸ್ಮರಣೆ ಅಂಗವಾಗಿ ಬಿಜೆಪಿ ಮಂಡಲದ ಕಾರ್ಯಾಲಯದಲ್ಲಿ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಗಳನ್ನು ಅರ್ಪಿಸಿ, ಗೌರವ ನಮನ ಸಲ್ಲಿಸುವ ಮೂಲಕ ಬಲಿದಾನ ದಿನ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಂಡಲದ ಪ್ರಧಾನ ಕಾರ್ಯದರ್ಶಿ ಎಸ್. ಕೆ. ಮೇಸ್ತ ಮಾತನಾಡಿ, ಶ್ಯಾಮ್ ಪ್ರಸಾದ್ ಮುಖರ್ಜಿ ಭಾರತೀಯ ಸಂಸ್ಕೃತಿಯ ಆಧಾರದ ಮೇಲೆ ದೇಶವನ್ನು ಪುನರ್ ನಿರ್ಮಾಣ ಮಾಡುವ ಹಾಗೂ ಜಗತ್ತಿನಲ್ಲಿ ಭಾರತವನ್ನು ಪ್ರಭಲ ರಾಷ್ಟವನ್ನಾಗಿಸುವ ಗುರಿಯನ್ನು ಇಟ್ಟುಕೊಂಡು ಆ ಮಹತ್ಕಾರ್ಯಕ್ಕೆ ತಮ್ಮ ಬದುಕನ್ನು ಮುಡುಪಾಗಿಟ್ಟು ನಮಗೆಲ್ಲಾ ದಾರಿದೀಪವಾಗಿದ್ದಾರೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಲು ನಡೆಸಿದ ಹೋರಾಟದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದರು. ದೇಶದ ಏಕತೆಗಾಗಿ ಶ್ರಮಿಸಿದ ಮಹಾನ್ ನಾಯಕ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಆದರ್ಶಗಳನ್ನು ಅವರ ಬಲಿದಾನ ದಿನವಾದ ಇಂದು ನಾವೆಲ್ಲರೂ ಸ್ಮರಿಸೋಣ ಎಂದು ಹೇಳಿದರು.
ಪ್ರಾಸ್ತಾವಿಕ ಮಾತನಾಡಿದ ಮಾಜಿ ಜಿಪಂ ಸದಸ್ಯ ಎಂ. ಜಿ. ಹೆಗಡೆ ಗೆಜ್ಜೆ, ಶ್ಯಾಮ್ ಪ್ರಸಾದ್ ಮುಖರ್ಜಿ ಒಬ್ಬ ದೇಶದ ಮಹಾನ್ ನಾಯಕ, ಪಾಕಿಸ್ತಾನದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯಕ್ಕೆ ಕಿಡಿಕಾರಿದರು ಹಾಗೂ ತಮ್ಮ ಮಂತ್ರಿಮಂಡಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಸುಮ್ಮನೆ ಕುಳಿತುಕೊಳ್ಳದೇ ಆನಂತರ ಭಾರತೀಯ ಜನಸಂಘ ಎಂಬ ಹೊಸ ಪಕ್ಷ ಕಟ್ಟಿದರು. ಆನಂತರ ದಿನಗಳಲ್ಲಿ ಜನಸಂಘ ಭಾರತೀಯ ಜನತಾ ಪಕ್ಷ ಪುನರ್ನಾಮಕರಣ ಹೊಂದಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿತು ಎಂದು ತಿಳಿಸಿದರು
ಇದೇ ವೇಳೆ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಿದ ಅಂಧ ಮಕ್ಕಳು ಆರ್ಥಿಕ ಸಂಕಷ್ಟದಲ್ಲಿದ್ದ ಬಗ್ಗೆ
ಕಾರ್ಯಕ್ರಮದ ವೇಳೆ ತಿಳಿಸಿದಾಗ ಪಟ್ಟಣ ಪಂಚಾಯತ ಸದಸ್ಯರು ಹಾಗೂ ಪದಾಧಿಕಾರಿಗಳು 1150 ರೂಪಾಯಿ ಹಣವನ್ನು ಸಂಗ್ರಹಿಸಿ ಇವರಿಗೆ ನೀಡಿದರು. ಅಂಧ ಮಕ್ಕಳು ಮುಖರ್ಜಿ ಅವರ ಭಾವಚಿತ್ರದ ಮುಂದೆ ದೇಶಭಕ್ತಿಗೀತೆ ಹಾಗೂ ಭಾವಗೀತೆ ಹಾಡುವ ಮೂಲಕ ಅವರಿಗೆ ನಮನವನ್ನು ಸಲ್ಲಿಸಿದರು.
ಪ್ರಧಾನ ಕಾರ್ಯದರ್ಶಿ ಪ್ರಸನ್ನ ಹೆಗಡೆ ,ಪಟ್ಟಣ ಪಂಚಾಯತ ಅಧ್ಯಕ್ಷ ಚಂದ್ರಕಲಾ ನಾಯ್ಕ, ಮಹಿಳಾ ಮೋರ್ಚಾ ಅಧ್ಯಕ್ಷ ಸುಮನಾ ಕಾಮತ್ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ ಸದಸ್ಯರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಯುವಮೋರ್ಚಾ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಹೆಗಡೆ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿ ವಂದನಾರ್ಪಣೆ ಮಾಡಿದರು.
#####
ಸಿದ್ದಾಪುರ ಲಯನ್ಸ್ ಅಧ್ಯಕ್ಷರಾಗಿ ಶ್ಯಾಮಲಾ ಹೆಗಡೆ ಆಯ್ಕೆ
ಸಿದ್ದಾಪುರ ಲಯನ್ಸ್ ಕ್ಲಬ್ಬಿನ 2021-22 ನೆ ವರ್ಷದ ಅದ್ಯಕ್ಷರಾಗಿ ಶ್ಯಾಮಲಾ ರವಿ ಹೆಗಡೆ ಹೂವಿನಮನೆ ಮರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಘವೇಂದ್ರ ಭಟ್ ಮತ್ತು ಖಜಾಂಚಿಯಾಗಿ ಪ್ರಶಾಂತ್ ಶೇಟ ಮತ್ತೆ ಆಯ್ಕೆಯಾಗಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಲಯನ್ ವೀಣಾ ಶೇಟ ಮತ್ತು ಜಂಟಿ ಖಜಾಂಚಿಯಾಗಿ ಡಾ.ಸುರೇಶ್ ಪಂಡಿತ್ ಆಯ್ಕೆಯಾಗಿದ್ದಾರೆ.