ಹಿಂದೂಜಾಗರಣಾ ವೇದಿಕೆಯಿಂದ ಉಪವಿಭಾಗಾಧಿಕಾರಿಗೆ ಮನವಿ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಅನಧಿಕೃತವಾಗಿ ವಾಸವಿದ್ದ ಪಾಕಿಸ್ತಾನಿ ಮಹಿಳೆಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಸದರ ಪಾಕಿಸ್ಥಾನಿ ಪ್ರಜೆಗೆ ಆಧಾರ ಕಾರ್ಡ,ಗುರುತಿನ ಚೀಟಿ ಮಾಡಿಕೊಟ್ಟ ಶಕ್ತಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರದಾನ ಕಾರ್ಯದರ್ಶಿ ಗೋಪಾಲ ದೇವಾಡಿಗ ನೇತೃತ್ವದಲ್ಲಿ ಶಿರಸಿ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್ ರಿಗೆ ಮನವಿ ಸಲ್ಲಿಸಿದರು.
ಪಾಕಿಸ್ಥಾನಿ ಪ್ರಜೆಗೆ ಆಧಾರ ಕಾರ್ಡ,ಗುರುತಿನ ಚೀಟಿ ಮಾಡಿಕೊಟ್ಟ ಶಕ್ತಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮಕೈಗೊಳ್ಳಬೇಕು.ದೇಶ ವಿದೇಶದಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆದಾಗಲೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಭಟ್ಕಳದೊಂದಿಗೆ ತಳಕು ಹಾಕಿಕೊಳ್ಳುತ್ತಿರುವುದು ಉತ್ತರಕನ್ನಡ ಜಿಲ್ಲೆಯವರಾದ ನಮಗೆ ಅತ್ಯಂತ ನೋವಿನ ಸಂಗತಿಯಾಗಿದೆ. ಇದರ ಜೊತೆಗೆ ಅಕ್ರಮಗಳು ಕೂಡಾ ನಡೆಯುತ್ತಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಈ ಎಲ್ಲವನ್ನು ಪತ್ತೆಹಚ್ಚಿ ಬಯಲಿಗೆಳೆದು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

About the author

Adyot

Leave a Comment