ಆದ್ಯೋತ್ ಸುದ್ದಿನಿಧಿ:
ಉತ್ತರ ಕನ್ನಡ ಜಿಲ್ಲೆ, ಶಿರಸಿ ವೃತ್ತ ವ್ಯಾಪ್ತಿಯಲ್ಲಿ ಹೊಸದಾಗಿ ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ, ೩೩ ಕೆವಿ ರೆಫೆರನ್ಸ್ ಗಳನ್ನು ಕಲ್ಪಿಸಿಕೊಡುವ, ಶಕ್ತಿ ಪರಿವರ್ತಕಗಳನ್ನು ವೃದ್ಧಿಸುವ ಕಾಮಗಾರಿಗಳು ಹಾಗೂ ಇನ್ನಿತರೆ ಕಾಮಗಾರಿಗಳನ್ನು ಕೆ.ಪಿ.ಟಿ.ಸಿ.ಎಲ್ ವತಿಯಿಂದ ತ್ವರಿತವಾಗಿ ಕೈಗೆತ್ತಿಕೊಳ್ಳುವ ಸಲುವಾಗಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ವಿಧಾನಸೌಧದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಸಚಿವ ಎಸ್.ಎಮ್.ಹೆಬ್ಬಾರ್ ಹಾಗೂ ಉ.ಕ.ಜಿಲ್ಲೆಯ ಶಾಸಕರಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ್, ಆರ್.ವಿ.ದೇಶಪಾಂಡೆ, ರೂಪಾಲಿ ನಾಯ್ಕ್ ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು ಚರ್ಚಿಸಿದರು.