ಶೇಲೂರನಲ್ಲಿ ವ್ಯಕ್ತಿಯ ಮೊಣಕಾಲು ಕಚ್ಚಿ ಗಾಯಗೊಳಿಸಿದ ಕರಡಿ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಪಂ ವ್ಯಾಪ್ತಿಯ ಶೇಲೂರನಲ್ಲಿ ಮಂಗಳವಾರ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಗೆ ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಗೆ ಕಳುಹಿಸಲಾಗಿದೆ.



ಶೇಲೂರು ಗ್ರಾಮದ ದತ್ತಾತ್ರೇಯ ನಾಗಾ ನಾಯ್ಕ(55) ಕರಡಿ ದಾಳಿಗೆ ಒಳಗಾದವರಾಗಿದ್ದು ಬೆಳಿಗ್ಗೆ 7 ಗಂಟೆಯ ಸುಮಾರಿಗೆ ತನ್ನ ತೋಟದಲ್ಲಿ ಕೆಲಸ ಮಾಡಿ ಮನೆಗೆ ಮರಳುತ್ತಿದ್ದಾಗ ಕರಡಿ ದಾಳಿ ಮಾಡಿ ಅವರ ಮೊಣಕಾಲಿಗೆ ಗಂಭೀರ ಗಾಯಮಾಡಿದೆ ಇವರ ಕೂಗಾಟ ಕೇಳಿದ ಅಕ್ಕ-ಪಕ್ಕ ಕೆಲಸ ಮಾಡುತ್ತಿದ್ದವರು ಬಂದು ಕರಡಿಯನ್ನು ಓಡಿಸಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ ಅರಣ್ಯ ಇಲಾಖೆಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

About the author

Adyot

Leave a Comment