ಆದ್ಯೋತ್ ಸುದ್ದಿನಿಧಿ:
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಪ್ರಥಮ ಪರ್ಯಾಯ ಪೂಜಾದೀಕ್ಷೆಯ ಮಂಗಲೋತ್ಸವದ ಸರದಿ ಕಾರ್ಯಕ್ರಮ
“ವಿಶ್ವಾರ್ಪಣಮ್’ ಡಿ.5 ರಿಂದ ಪ್ರಾರಂಭವಾಗಿದ್ದು ವಿವಿಧ ಉಪನ್ಯಾಸ ಕಾರ್ಯಕ್ರಮ,ಸಾಂಸ್ಕೃತಿಕ ಹಾಗೂ ಆಶೀರ್ವಚನ ಕಾರ್ಯಕ್ರಮ ನಡೆಯುತ್ತಿದೆ.
ಡಿ.26ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಆಶೀರ್ವಚನ ಕಾರ್ಯಕ್ರಮ ನಡೆಯುತ್ತಿದ್ದು ಇಲ್ಲಿಯವರೆಗೆ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರತೀರ್ಥ ಶ್ರೀಪಾದರು,ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ,ಆರ್ಯ ಈಡಿಗ ಸಂಸ್ಥಾನದ ಶ್ರೀ ವಿಖ್ಯಾತಾ ನಂದ ಸ್ವಾಮೀಜಿ,ಎಡನೀರು ಮಠದ ಶ್ರೀಸಚ್ಚಿದಾನಂದಭಾರತೀ ಸ್ವಾಮೀಜಿ, ಮೂಡಬಿದಿರೆ ಜೈನಮಠದ ಶ್ರೀಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಒಡಿಯೂರು ಶ್ರೀಗುರುದೇವಾನಂದ ಸ್ವಾಮೀಜಿ,ಆನೆಗುಂದಿ ಮಠದ ಶ್ರೀಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ,ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ,ಕೊಲ್ಹಾಪುರದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ,ಕರಿಂಜೆ ಮಠದ ಶ್ರೀಮುಕ್ತಾನಂದ ಸ್ವಾಮೀಜಿ,ಸಿರಿಗೆರೆ ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ,ಶ್ರೀ ಕಾಶೀ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು, ಬಾಳಕುದ್ರಿ ಸ್ವಾಮೀಜಿಯವರು ಆಶೀರ್ವಚನ ನೀಡಿದ್ದಾರೆ.
ಸೋಮವಾರ ಶಿರಸಿ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದ್ದು ಕೇಂದ್ರಸರಕಾರ ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು ಹೆಚ್ಚಿಸುತ್ತಿರುವುದನ್ನು ಬಲವಾಗಿ ವಿರೋಧಿಸಿದ್ದಾರೆ.
ಈ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದು”
ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಸರಿಯಬೇಕು ದೇಶದಲ್ಲಿ ಮದುವೆಗೆ ಸಂಬಂಧಿಸಿದಂತೆ ಕ್ರೈಸ್ತರು ಮತ್ತು ಮುಸ್ಲಿಮರಿಗೆ ಪ್ರತ್ಯೇಕ ಕಾನೂನು ಇದೆ. ಕೇಂದ್ರ ಸರ್ಕಾರ ಕೇವಲ ಹಿಂದೂಗಳನ್ನು ಗುರಿಯಾಗಿರಿಸಿ ಈ ಕಾನೂನು ಜಾರಿಗೆ ಹೊರಟಿದೆ. ಇದರಿಂದ ಹಿಂದೂಗಳ ಜನಸಂಖ್ಯೆ ಇಳಿಮುಖವಾಗಲಿದೆ. ಅಲ್ಪ ಸಂಖ್ಯಾತರಾಗುವ ಭೀತಿ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.