ಆದ್ಯೋತ್ ಸುದ್ದಿನಿಧಿ:
ಉಜಿರೆ ಶ್ರೀರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಬರಹವನ್ನು ಹಾಕಿದ್ದಾರೆ ಎಂದು ಆರೋಪಿಸಿ ಉತ್ತರಕನ್ನಡ ಜಿಲ್ಲೆ ಸಿದ್ದಾಪುರದ ನಾಮಧಾರಿ ಅಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಜಿ.ನಾಯ್ಜಹಣಜೀಬೈಲ್ ಫೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ತಿಂಗಳು ಸಿದ್ದಾಪುರ ಹರಕನಹಳ್ಳಿ ಗ್ರಾಮದ ವೀರಭದ್ರ ದೇವಾಲಯದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ಧರ್ಮಸಭೆಯಲ್ಲಿ”ಸಂವಿಧಾನವನ್ನು ತಿದ್ದುಪಡಿ ಮಾಡಬಹುದು ಆದರೆ ವೇದಗಳನ್ನು ತಿದ್ದಲು ಅಥವಾ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ವೇದಗಳು ಜಗತ್ತು ಸೃಷ್ಟಿಯಾದ ದಿನದಿಂದ ಇವೆ ನಾಗರಿಕ ಸಮಾಜದ ರೀತಿ-ನೀತಿಗಳು ಹೇಗಿರಬೇಕು ಎನ್ನುವುದನ್ನು ವೇದಗಳು ಹೇಳಿವೆ.ಹೀಗಾಗಿ ವೇದವೆ ಹೆಚ್ಚು ತೂಕ ಉಳ್ಳದ್ದು ಎಂದು ಹೇಳಿದ್ದರು.
ಇದರಲ್ಲಿ ನಮ್ಮ ಸಂವಿಧಾನಕ್ಕೆ ಅಪಚಾರವಾಗುವಂತಹ ಯಾವುದೇ ಹೇಳಿಕೆಯನ್ನು ನೀಡಿರುವುದಿಲ್ಲ ಮಾಧ್ಯಮದಲ್ಲಿ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಭಾರತ ಭಾಗ್ಯವಿಧಾತ ಅಂಬೇಡ್ಕರ್ ಎನ್ನುವ ಪೆಸಬುಕ್ ನಕಲಿ ಖಾತೆ ತೆರೆದು ಸ್ವಾಮಿಜಿಗಳ ಬಗ್ಗೆ ಅವಹೇಳನಕಾರಿ ಬರಹವನ್ನು ಹಾಕಿರುತ್ತಾರೆ.ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ ಇರುತ್ತದೆ ಆದ್ದರಿಂದ ಆರೋಪಿತರ ವಿರುದ್ದ ಸೈಬರ್ ಕ್ರೈಂ ಪ್ರಕರಣ ದಾಖಲಿಸಿ ಆರೋಪಿತರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.