ಆದ್ಯೋತ್ ಸುದ್ದಿನಿಧಿ:
ದಾಣಗೇರೆಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಶ್ರೀಭಗವದ್ಗೀತಾ ಅಭಿಯಾನ ಕರ್ನಾಟಕ-2ರ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಅಭಿಯಾನದ ಮಹಾಸಮರ್ಪಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಲ್ಲೋಟ್ ಮಾತನಾಡಿ,ಯುವಕರು ಧರ್ಮ-ಸಂಸ್ಕೃತಿ ಮತ್ತು ಶ್ರೀ ಭಗವದ್ಗೀತಾ ಜ್ಞಾನವನ್ನು ಅಳವಡಿಸಿಕೊಂಡು ಸರ್ವರೂ ಸಮಾನರು, ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಸಮಾಜದಲ್ಲಿ ಶಾಂತಿ, ಸಮಾನತೆ, ಮಾನವೀಯತೆಯನ್ನು ಕಾಪಾಡಲು ಮುಂದಾಗಬೇಕು.ಧಾರ್ಮಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಚಿಂತನೆಯೊಂದಿಗೆ ಮುನ್ನಡೆಯುವ ಜವಾಬ್ದಾರಿ ನಮ್ಮ ಯುವ ಪೀಳಿಗೆಯ ಮೇಲಿದೆ. ಯುವಕರು ಧರ್ಮ-ಸಂಸ್ಕೃತಿ ಮತ್ತು ಶ್ರೀ ಭಗವದ್ಗೀತಾ ಜ್ಞಾನವನ್ನು ಅಳವಡಿಸಿಕೊಂಡು ಸರ್ವರೂ ಸಮಾನರು, ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಸಮಾಜದಲ್ಲಿ ಶಾಂತಿ, ಸಮಾನತೆ, ಮಾನವೀಯತೆಯನ್ನು ಕಾಪಾಡಲು ಮುಂದಾಗಬೇಕು.
2007 ರಿಂದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಜಿ ಅವರ ಮೂಲಕ ಶ್ರೀ ಭಗವದ್ಗೀತಾ ಅಭಿಯಾನವನ್ನು ಶ್ಲೋಕಗಳ ಪಠಣ, ಗೀತಾ ಪ್ರವಚನ, ಪುಸ್ತಕಗಳ ವಿತರಣೆ, ಗೀತಾ ಪುಸ್ತಕಗಳ ಪ್ರದರ್ಶನ, ಶ್ರೀ ಭಗವದ್ಗೀತೆಯ ಕುರಿತು ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿಗಳ ಮೂಲಕ ನಡೆಸಲಾಗುತ್ತಿದೆ. ಬಾಲ್ಯದಿಂದಲೇ ಗೀತಾ ಜ್ಞಾನವನ್ನು ನೀಡಲಾಗುತ್ತಿದೆ. ನಿಮ್ಮ ಈ ಕಾರ್ಯ ಶ್ಲಾಘನೀಯ, ಇದಕ್ಕಾಗಿ ನಾವು ನಿಮಗೆ ಕೃತಜ್ಞರಾಗಿರುತ್ತೇವೆ ಎಂದು ಗೆಲ್ಲೋಟ್ ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿ, ಸಂಸದ ಜಿ.ಎಂ. ಸಿದ್ದೇಶ್ವರ್, ಮೇಯರ್ ಜಯಮ್ಮ ಗೋಪಿ ನಾಯ್ಕ, ಶ್ರೀ ತರಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ, ಶ್ರೀ ಸೋಂದ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಶ್ರೀಮದ್ ಗಂಗಾದರೇಂದ್ರ ಸರಸ್ವತಿ ಸ್ವಾಮೀಜಿ, ಮಹಾಯೋಗಿ ವೇಮನ ಸಂಸ್ಥಾನ ಮಠದ ಶ್ರೀ ವೇಮನಾನಂದ ಸ್ವಾಮಿಜಿ, ರಾಮಕೃಷ್ಣ ಆಶ್ರಮದ ಶ್ರೀ ತ್ಯಾಗಿಶ್ವರಾನಂದ ಮಹಾರಾಜ್ ಸೇರಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.