ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕುಟುಂಬ ಸಮೇತವಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಬೆಳ್ಳಿಮಂಟಪವನ್ನು ಶಾಸ್ತ್ರೋಕ್ತವಾಗಿ ಸಮರ್ಪಿಸಿದರು.
ನಂತರ ಮಾತನಾಡಿದ ಶಿವರಾಮ ಹೆಬ್ಬಾರ್.ಕದಂಬರ ರಾಜಧಾನಿಯಾಗಿದ್ದ ಬನವಾಸಿಯಲ್ಲಿ ನಡೆಯುತ್ತಿದ್ದ ಕದಂಬೋತ್ಸವ ಕಳೆದ ಮೂರು ವರ್ಷದಿಂದ ಮಂಗನ ಕಾಯಿಲೆ, ಕೊರೊನಾ ಆತಂಕದಿಂದ ನಡೆದಿಲ್ಲ. ಆದರೆ ಈ ಬಾರಿ ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ಫೆ.25 ಫೆ26 ಕದಂಬೋತ್ಸವ ನಡೆಸಲಾಗುವುದು.ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು ಒಪ್ಪಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳು ಭಾಗವಹಿಸಲಿದ್ದು ಕದಂಬೋತ್ಸವ ಜೊತೆಗೆ ವಿವಿಧ ಕಾಮಗಾರಿ ಹಾಗೂ ಶ್ರೀ ಮಧುಕೇಶ್ವರ ದೇವಸ್ಥಾನದ ನೂತನ ರಥ ಸಮರ್ಪಣಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬನವಾಸಿ ಭಾಗದ ಮುಖಂಡರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಶ್ರೀ ಮಧುಕೇಶ್ವರ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.