ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿ : ಆರ್.ವಿ.ಡಿ

ಸಿದ್ದಾಪುರ : ಸಿದ್ದರಾಮಯ್ಯನವರು ಶಾಸಕಾಂಗ ಪಕ್ಷದ ನಾಯಕರಾಗಿಯೇ ಮುಂದುವರೆಯಲಿ. ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳುವ ಹಕ್ಕಿದೆ ಎಂದು ಮಾಜಿ ಸಚಿವ ಹಳಿಯಾಳದ ಶಾಸಕ ಆರ್.ವಿ ದೇಶಪಾಂಡೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದಾರೆ.

ಇಂದು ಸಿದ್ದಾಪುರದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು
ಕೆಪಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವಧಿ ಮುಗಿದಿಲ್ಲ, ಮುಗಿದ ನಂತರ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಹೈಕಮಾಂಡ್ ಎಲ್ಲರ ಅಭಿಪ್ರಾಯ ತೆಗೆದುಕೊಂಡಿದೆ. ನಾಲ್ಕು ದಿನದಲ್ಲಿ ಅಧ್ಯಕ್ಷ ಸ್ಥಾನದ ಕುರಿತು ಹೈಕಮಾಂಡ್ ಪ್ರಕಟಿಸುತ್ತದೆ. ನನಗೆ ಪಕ್ಷದ ಜವಾಬ್ದಾರಿ ತೆಗೆದುಕೊಳ್ಳುವ ಕುರಿತು ಹೈಕಮಾಂಡ್ ಕೇಳಿತ್ತು. ನಾನು ಸ್ಥಾನಕ್ಕೆ ಆಕಾಂಕ್ಷಿಯಲ್ಲ ಎಂದರು.

ರಾಜ್ಯ ಸರ್ಕಾರದ ಗೊಂದಲದಲ್ಲಿದೆ. ಸಂಪುಟ ವಿಸ್ತರಣೆ ಬಗ್ಗೆ ಗೊಂದಲವಿದೆ. ಹಣವೇ ಸರ್ಕಾರದಲ್ಲಿ ಇಲ್ಲದಿದ್ದಾಗ ಅಭಿವೃದ್ಧಿ ಪ್ರಶ್ನೆ ಎಲ್ಲಿಂದ ಬಂತು? ಅಭಿವೃದ್ಧಿ ಸ್ಥಗಿತವಾಗಿದೆ,
ರಾಜ್ಯದಲ್ಲಿ ಯಾವ ರೀತಿ ಅಭಿವೃದ್ಧಿ ಆಗಬೇಕು ಅದು ಆಗುತ್ತಿಲ್ಲ, ರಾಜಕೀಯವಾಗಿ ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಯಾವ ರೀತಿ ಬೆಂಬಲ ಸಿಗಬೇಕು ಅದು ಸಿಗುತ್ತಿಲ್ಲ ಎಂದು ಖೇದ ವ್ಯಕ್ತಪಡಿಸಿದರು.

About the author

Adyot

Leave a Comment