ಆದ್ಯೋತ್ ಸುದ್ದಿನಿಧಿ:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ವಿಧಾನ ಸಭಾ ಕ್ಷೇತ್ರದ ಭರಮಸಾಗರದಲ್ಲಿ ‘ಕಾಂಗ್ರೆಸ್ ಗ್ಯಾರಂಟಿ’ ಕಾರ್ಡ್ ಗಳನ್ನು ಮನೆ ಮನೆಗೆ ವಿತರಿಸುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಉಪಾಧ್ಯಕ್ಷ,ಮಾಜಿ ಸಚಿವ .ಹೆಚ್.ಆಂಜನೇಯ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಆಂಜನೇಯಲು,’ಕಾಂಗ್ರೆಸ್ ಗ್ಯಾರಂಟಿ’ ಘೋಷಣೆ ಅಡಿಯಲ್ಲಿ ಬರುವ 200 ಯುನಿಟ್ ಉಚಿತ ವಿದ್ಯುತ್, ಮನೆಯ ಮಹಿಳಾ ಮುಖ್ಯಸ್ಥೆಗೆ 2,000 ರೂಗಳ ಮಾಸಾಶನ ಸೇರಿದಂತೆ ಕಾಂಗ್ರೆಸ್ ಪಕ್ಷ ಘೋಷಿಸಿದ ಪ್ರಮುಖ ಅಂಶಗಳನ್ನು ಮನೆ ಮನೆಗೆ ತಲುಪಿಸಬೇಕು.
ಬಿಜೆಪಿ ಸರ್ಕಾರದ ಆಡಳಿತದಲ್ಲಿನ ಬೆಲೆ ಏ
ರಿಕೆ, ಯುವ ಜನತೆ, ರೈತರು, ಮಹಿಳೆಯರಿಗೆ ಈ ಸರ್ಕಾರ ಮಾಡಿರುವ ದ್ರೋಹ, ದಾಖಲೆ ಮಟ್ಟದ ಭ್ರಷ್ಟಾಚಾರ, ಅವ್ಯವಸ್ಥೆ ಸೇರಿದಂತೆ ಬಿಜೆಪಿ ಪಕ್ಷದ ಅಸಮರ್ಥತೆಗಳ ಬಗ್ಗೆ
ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಜನತೆಗೆ ಮುಟ್ಟಿಸಬೇಕು ಎಂದು ಕರೆ ನೀಡಿದರು.
ಈ ವೇಳೆ ಕೆಪಿಸಿಸಿ ಸದಸ್ಯರು,ಮಾಜಿ ಜಿ.ಪಂ ಸದಸ್ಯ ಹೆಚ್.ಎನ್.ತಿಪ್ಪೇಸ್ವಾಮಿ,ಚಿತ್ರದುರ್ಗ ಜಿಲ್ಲಾ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಆರ್.ಕೃಷ್ಣಮೂರ್ತಿ,ಭರಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಅಳಗವಾಡಿ,ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದುರ್ಗೇಶ್ ಪೂಜಾರ್,ಮಾಜಿ ಜಿ. ಪಂ ಸದಸ್ಯ ನರಸಿಂಹರಾಜ,ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಮುಬಾರಕ್,ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುಳಾ ಸೇರಿದಂತೆ ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು,ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.