ಆದ್ಯೋತ್ ಸುದ್ದಿನಿಧಿ:
ಹೊಸ ಪ್ರಯೋಗಕ್ಕೆ ಮುಂದಾಗಿರುವ ಬಿಜೆಪಿ ಹೈಕಮಾಂಡಗೆ ದೊಡ್ಡ ಅಘಾತವಾಗುತ್ತಿದೆ.ಈಗಾಗಲೇ ಲಕ್ಷ್ಮಣ ಸವದಿ ಬಿಜೆಪಿಯನ್ನು ತೊರೆದಿದ್ದು ರವಿವಾರ ಜಗದೀಶ ಶೆಟ್ಟರ್ ಬಿಜೆಪಿಯನ್ನು ತೊರೆದಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಿರಸಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಭೇಟಿಯಾಗಿ
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಗೇರಿ ಕಚೇರಿಗೆ ಶೆಟ್ಟರ್ ಭೇಟಿ ನೀಡುತ್ತಿದ್ದಂತೆ ತಮ್ಮ ಬಹುಕಾಲದ ಗೆಳೆಯ ಜಗದೀಶ್ ಶೆಟ್ಟರ್ ಅವರನ್ನು ಸ್ಪೀಕರ್ ಬರಮಾಡಿಕೊಂಡಿದ್ದಾರೆ.
ಹುಬ್ಬಳ್ಳಿ – ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಅಸಮಾಧಾನಗೊಂಡ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದಿದ್ದಾರೆ.
ಇಂದು ಸಂಜೆ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಅವರ ಆಪ್ತವಲಯಗಳು ಹೇಳುತ್ತಿವೆ.