ಆದ್ಯೋತ್ ಸುದ್ದಿನಿಧಿ:
ಸಿದ್ದಾಪುರ ತಾಲೂಕಿನ ಬಿಳಗಿ ಸಮೀಪ ಗುಡ್ಡ ಕುಸಿದು ರಸ್ತೆಯ ಮೇಲೆ ಬಿದ್ದಿದ್ದು,ಕುಮಟಾ-ಕೊಡಮಡಗಿ ರಾಜ್ಯ ಹೆದ್ದಾರಿ ಬಂದ್ ಆಗಿದೆ.
ಕಳೆದ ಹದಿನೈದು ದಿನದಿಂದ ಧಾರಾಕಾರ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ವಿಪರೀತ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿದ್ದು ಭೂಕುಸಿತ ಸಂಭವಿಸುತ್ತಿದೆ.ರವಿವಾರ ಈಡೀ ದಿನ ಮಳೆಯಾಗಿದ್ದು ತಡರಾತ್ರಿ ಬಿಳಗಿ ಸಮೀಪ ಭೂಕುಸಿತವಾಗಿದೆ.