ಆದ್ಯೋತ್ ಸುದ್ದಿನಿಧಿ:
ರಾಜ್ಯದ ಕಾಂಗ್ರೆಸ್ ಸರಕಾರ ರೈತವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾದಿಂದ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.
ರೈತಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ ಹೊಸಕೊಪ್ಪ ಮಾತನಾಡಿ,
ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಮಕ್ಕಳಿಗೆ ಅನುಕೂಲವಾಗುವ ವಿದ್ಯಾಸಿರಿ, ಭೂಸಿರಿ, ಶ್ರಮಶಕ್ತಿ ಸೇರಿದಂತೆ ಹಲವು ರೈತ ಪರ ಯೋಜನೆ ಜೊತೆಗೆ, ಜಿಲ್ಲೆಯಲ್ಲಿ ಗೋಶಾಲೆ ಸ್ಥಾಪಿಸಲು ಅನುದಾನ ಮಿಸಲಿಟ್ಟಿತ್ತು. ಈಗ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಬಿಜೆಪಿಯ ಈ ರೈತಪರ ಯೋಜನೆಗಳನ್ನೆಲ್ಲ ರದ್ದುಪಡಿಸಿದೆ ಎಂದರು.
ಮಾಜಿ ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಹಿಂದೆ ಇದ್ದ ಬಿಜೆಪಿ ಸರಕಾರದ ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರು ಅನೇಕ ರೈತಪರ, ಜನಪರ ಯೋಜನೆ ರದ್ದು ಮಾಡುವ ಕೆಟ್ಟ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದು ರೈತವಿರೋಧಿ ಸರ್ಕಾರ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೆಕರ್, ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ, ವಿಭಾಗ ಸಹ ಪ್ರಭಾರಿ ಎನ್ ಎಸ್ ಹೆಗಡೆ ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ನಿರ್ವಹಿಸಿದರು. ಒಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ರಾಜೇಂದ್ರ ನಾಯ್ಕ, ಹಾಗೂ ರೈತ ಮೋರ್ಚಾ ಜಿಲ್ಲಾ ಪ್ರಭಾರಿ ಗೋಪಾಲಕೃಷ್ಣ ವೈದ್ಯ, ಗೋವಿಂದ ನಾಯ್ಕ, ಜಿಲ್ಲಾ ವಕ್ತಾರ ನಾಗರಾಜ ನಾಯಕ, ರೈತಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಕುಮಾರ ನಾಯ್ಕ & ವಿಷ್ಣುಮೂರ್ತಿ ಹೆಗಡೆ ಉಪಸ್ಥಿತರಿದ್ದರು.