ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ ಯಮುನಾ ಗಾಂವಕರ್

ಆದ್ಯೋತ್ ಸುದ್ದಿನಿಧಿ:
ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸರಕಾರಿ ನೌಕರರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ 17 ಜನರಿಗೆ ಘೋಷಣೆಯಾಗಿದೆ.
ಈಗಾಗಲೇ ಪ್ರಶಸ್ತಿ ಘೋಷಣೆಯಾಗಿರುವ,ವಿವಿಧ ಹೋರಾಟದಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿರುವ ಸಾಮಾಜಿಕ. ಹೋರಾಟಗಾರ್ತಿ ಯಮುನಾ ಗಾಂವ್ಕರ ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರಬರೆದಿರುವ ಯಮುನಾ ಗಾಂವ್ಕರ್ ಪ್ರಶಸ್ತಿಗೆ ತನ್ನನ್ನು ಪರಿಗಣಿಸಿದ್ದಕ್ಕೆ ಧನ್ಯವಾದಗಳನ್ನು ಸೂಚಿಸಿದ್ದು ಆದರೆ ಪ್ರಶಸ್ತಿ ಪಡೆಯುವುದಕ್ಕೆ ನಿರಾಕರಿಸಿದ್ದಾರೆ‌
ಅಕ್ಷರದಾಸೋಹ ಬಿಸಿಅಡುಗೆಯವರ ಅಹೋರಾತ್ರಿ ಹೋರಾಟದಲ್ಲಿ ತೊಡಗಿಕೊಂಡಿದ್ದ ಕಾರಣ ವಿಷಯ ತಿಳಿದು
ನನ್ನ ತೀರ್ಮಾನವನ್ನು ತಿಳಿಸಲು ತಡವಾಯಿತು‌ ನಾನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಜಿಲ್ಲಾ ಕಾರ್ಯದರ್ಶಿ ಯಾಗಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಯಾಗಿ, ಅಖಿಲ ಭಾರತ ಜನರಲ್ ಕೌನ್ಸಿಲ್ ಸದಸ್ಯೆಯಾಗಿ ಹಾಗೂ ಜಿಲ್ಲೆಯ ಅಂಗನವಾಡಿ, ಅಕ್ಷರದಾಸೋಹ, ಪಂಚಾಯತ್ ಹಾಗೂ ಪೌರ, ಇನ್ನಿತರೇ ಸಂಘಟಿತ ಅಸಂಘಟಿತ ಕಾರ್ಮಿಕರ ಮತ್ತು ರೈತ ಕೂಲಿಕಾರರ, ಆದಿವಾಸಿಗಳ ಸಂಘಟನೆಯಲ್ಲಿ ಕಮ್ಯುನಿಸ್ಟ್ ಮೌಲ್ಯಗಳೊಂದಿಗೆ ಬದ್ಧತೆಯಿಂದ ತೊಡಗಿಸಿಕೊಂಡಿದ್ದೇನೆ. ಅಲ್ಲದೇ ಮಾನ್ಯ ಡಿಸಿಯವರ ಅಧ್ಯಕ್ಷತೆಯ ನಿಯಮ ೧೭ ರ ಸಮಿತಿಯಲ್ಲಿ (SCST ಜನರ ಮೇಲಿನ ದೌರ್ಜನ್ಯ ವಿರೋಧಿ ಸಮಿತಿ) ಸದಸ್ಯೆಯಾಗಿದ್ದೇನೆ. ಸರ್ಕಾರದ ಎದುರು ಅನೇಕ ಸಮಸ್ಯೆಗಳ ವಿರುದ್ಧ ಪರಿಹಾರಕ್ಕೆ ಪ್ರತಿನಿತ್ಯ ಹೋರಾಟದ ಮಾರ್ಗದಲ್ಲಿದ್ದೇನೆ. ಹೀಗೆ ಸಂಘಟನಾ ಚೌಕಟ್ಟಿನಲ್ಲಿ ಇರುವುದರಿಂದಲೂ, ವೈಯುಕ್ತಿಕ ವಾಗಿಯೂ ಸರ್ಕಾರ ಕೊಡಮಾಡುವ ಈ ಪ್ರಶಸ್ತಿಯನ್ನು ನಾನು ಸ್ವೀಕರಿಸುವುದಿಲ್ಲವೆಂದು ಗೌರವಯುತವಾಗಿ ತಿಳಿಸುತ್ತಿದ್ದೇನೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕುರಿತು ಆದ್ಯೋತ್ ನ್ಯೂಸ್ ಗೆ ಪ್ರತಿಕ್ರಿಯಿಸಿರುವ ಯಮುನಾ ಗಾಂವ್ಕರ್,ನಾನು ಯಾವುದೇ ಪ್ರಶಸ್ತಿಗೆ ಅರ್ಜಿ ಹಾಕಿಲ್ಲ,ಪ್ರಭುತ್ವದ ವಿರುದ್ದ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದೆನೆ.ಸರಕಾರ ಕೊಡಮಾಡುತ್ತಿರುವ ಪ್ರಶಸ್ತಿ ಸ್ವೀಕಾರಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ.ನನ್ನ ಸಿದ್ದಾಂತ,ಹೋರಾಟ ನೊಂದವರ ಪರವಾಗಿರುತ್ತದೆ ಇಂತಹ ಪ್ರಶಸ್ತಿಗಳು ನನ್ನ ಹೋರಾಟಕ್ಕೆ ಅಡ್ಡಿಯಾಗಬಹುದು ಇದೆಲ್ಲ ಕಾರಣದಿಂದ ನಾನು ಪ್ರಶಸ್ತಿಯನ್ನು ನಿರಾಕರಿಸಿದ್ದೆನೆ ಹಾಗಂತ ನನ್ನಂತೆ ಉಳಿದವರು ಪ್ರಶಸ್ತಿ ನಿರಾಕರಿಸಬೇಕು ಎಂದು ನಾನು ಹೇಳುತ್ತಿಲ್ಲ ಅವೆಲ್ಲವು ಅವರವರ ಮನಸ್ಸಿಗೆ ಸಂಬಂಧಿಸಿದ್ದು ಸಮಾಜದಲ್ಲಿ ನನಗಿಂತ ಉತ್ತಮ ಸಾಧನೆ ಮಾಡಿದ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಬಹುದು.

About the author

Adyot

Leave a Comment