ಏಕದಿನ ಸರಣಿ : ಆಸ್ಟ್ರೇಲಿಯಾ ವಿರುದ್ಧ ಭಾರತ ಭರ್ಜರಿ ಜಯಭೇರಿ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ
ಆಸ್ಟ್ರೇಲಿಯಾ ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯಭೇರಿ ಬಾರಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 286 ರನ್ ಗಳಿಸಿತ್ತು. ಉತ್ತಮ ಬೌಲಿಂಗ್ ಪ್ರದರ್ಶಿಸಿದ ಶಮಿ 4 ವಿಕೆಟ್ ಕಬಳಿಸಿದರು. ಗೆಲುವಿಗೆ 287 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ರೋಹಿತ್ ಶರ್ಮಾರ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ ಯ ಅದ್ಭುತ ಆಟದ ನೆರವಿನಿಂದ 47.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ಇದರೊಂದಿಗೆ 3 ಪಂದ್ಯಗಳ ಅಂತಾರಾಷ್ಟ್ರೀಯ ಏಕದಿನ ಸರಣಿಯನ್ನು 2-1 ರ ಮೂಲಕ ತನ್ನದಾಗಿಸಿಕೊಂಡಿತು.

About the author

Adyot

Leave a Comment