ತೈಲ ಬೆಲೆ ಏರಿಕೆ ಶಿರಸಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಆದ್ಯೋತ್ ಸುದ್ದಿನಿಧಿ:
ರಾಜ್ಯಸರಕಾರ ತೈಲಬೆಲೆಯನ್ನು ಏರಿಸಿರುವುದನ್ನು ಖಂಡಿಸಿ ಶಿರಸಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ,ರಾಜ್ಯದಲ್ಲಿ ಕಾಂಗ್ರೇಸ್ ನೇತೃತ್ವದ ಸರ್ಕಾರ ಕಳೆದ ಒಂದು ವರ್ಷದಿಂದ ಅರಾಜಕತೆಯ ಆಡಳಿತ ನಡೆಸುತ್ತಿದೆ. ಅನೇಕ ಆಸೆ, ಆಮಿಷಗಳನ್ನು ತೋರಿಸಿದರು ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಾರೆ ಇದರಿಂದ ದ್ವೇಷದಿಂದ ಬೆಲೆ ಏರಿಕೆ ಮಾಡಿ ಜನರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆ ಸರ್ಕಾರ, ಕಾನೂನು ಶಾಂತಿ, ಸುವ್ಯವಸ್ಥೆ ಹಾಳು ಮಾಡಿ ಆತಂಕದಲ್ಲಿ ಜೀವನ ನಡೆಸುವಂತಾಗಿದೆ.ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಮತಗಳಿಕೆಗೆ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ.ರಾಜ್ಯದಲ್ಲಿ ಅಪರಾಧಿಕರಣ ಬೆಳೆಯುತ್ತಿದ್ದು, ಕಾಂಗ್ರೆಸ್ ಸರ್ಕಾರ ಅಪರಾಧಿಗಳನ್ನು ರಕ್ಷಣೆ ಮಾಡುತ್ತಿದೆ. ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ತಿರಸ್ಕಾರ ಮಾಡಬೇಕಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ರಾಜೀನಾಮೆ ನೀಡಲಿ ಎಂದರು.

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ , ಸಿದ್ದರಾಮಯ್ಯ ಸರ್ಕಾರ 5 ಗ್ಯಾರಂಟಿ ಎಂಬ ಆಸೆ ತೋರಿಸಿ, ಜನರನ್ನು ಕುರಿಯನ್ನಾಗಿ ಮಾಡಿದ್ದಾರೆ.ಸರಕಾರ ಕೂಡಲೇ ಬೆಲೆ ಏರಿಕೆ ಇಳಿಸಬೇಕು.ಸರ್ಕಾರದ ಖಜಾನೆ ಲೂಟಿ ಮಾಡಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಟ್ಟ ಹಣವನ್ನು ಸಿದ್ಧರಾಮಯ್ಯ ಸರ್ಕಾರ ನುಂಗಿದೆ. ಸಿದ್ದರಾಮಯ್ಯನವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

About the author

Adyot

Leave a Comment