ಶಿರಸಿ : ರಾಜ್ಯ ಪ್ರಸಿದ್ಧ ಬನವಾಸಿಯ ಕದಂಬೋತ್ಸವ ಫೆಬ್ರವರಿ 8 ಮತ್ತು 9 ರಂದು ನಡೆಯಲಿದ್ದು, ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಉತ್ಸವದ ಅಧಿಕೃತ ಘೋಷಣೆಯನ್ನು ಜಿಲ್ಲಾಉಸ್ತುವಾರಿ ಸಚಿವರು ಮಾಡಲಿದ್ದಾರೆ ಎಂದು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.
ಶಿರಸಿಯ ಮಿನಿ ವಿಧಾನಸೌಧದಲ್ಲಿ ನಡೆದ ಕದಂಬೋತ್ಸವ ಪೂರ್ವ ತಯಾರಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಫೆಬ್ರವರಿ 6 ರಂದು ಕದಂಬ ಜ್ಯೋತಿ ಹೊರಡಲಿದ್ದು, 8 ಮತ್ತು 9 ರಂದು ಮಯೂರವರ್ಮ ವೇದಿಕೆಯಲ್ಲಿ ಮುಖ್ಯ ಉತ್ಸವ ನಡೆಯಲಿದೆ. ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಸಭಾಧ್ಯಕ್ಷರು ಮಾಹಿತಿ ನೀಡಿದ್ದು, ಎಲ್ಲಾ ಕಾರ್ಯಕ್ರಮಗಳ ಅಧಿಕೃತ ಘೋಷಣೆಯನ್ನ ಜಿಲ್ಲಾ ಉಸ್ತುವಾರಿಗಳು ಮಾಡಲಿದ್ದಾರೆ ಎಂದರು.
ಸಭೆಯಲ್ಲಿ ಉತ್ಸವದಲ್ಲಿ ನಡೆಯಬೇಕಾದ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ವಿವಿಧ ಜನಪ್ರತಿನಿಧಿಗಳು ಹಾಜರಿದ್ದರು.