ಸಿದ್ದಾಪುರ ಶ್ರೀಮನ್ನೆಲೆಮಾವು ಮಠದ ಶ್ರೀಗಳ ಚಾತುರ್ಮಾಸ್ಯ ಸಮಾಪ್ತಿ

ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆ ಸಿದ್ದಾಪುರದ ಶ್ರೀಮನ್ನೆಲೆಮಾವು ಮಠದ ಪೀಠಾದೀಶ್ವರರಾದ ಶ್ರೀ ಮಧವಾನಂದ ಭಾರತಿ ಮಹಾಸ್ವಾಮಿಗಳು ಚಾತುರ್ಮಾಸ್ಯ ವ್ರತ ಸಮಾಪ್ತಿ ಅಂಗವಾಗಿ ನೆಲೆಮಾವು ನದಿ ತೀರದಲ್ಲಿ ಗಂಗಾಪೂಜೆ ನೆರವೇರಿಸಿ ಸೀಮೋಲ್ಲಂಘನಗೈದರು.

ಶ್ರೀಮಠದಲ್ಲಿ ಇಂದು ವಿಶೇಷ ಅನುಷ್ಠಾನ, ಶ್ರೀ ಲಕ್ಷ್ಮೀನರಸಿಂಹ ದೇವರ ಪೂಜಾ ಕೈಂಕರ್ಯಗಳನ್ನು ಶ್ರೀಗಳವರು ನೆರವೇರಿಸಿದರು. ನಂತರ ಹೇರೂರಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಾಗೂ ಸರಕುಳಿಯ ಶ್ರೀ ಮಹಿಷಾಸುರ ಮರ್ಧಿನಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀಮಠದ ಆಡಳಿತ ಸಮಿತಿಯ ಅಧ್ಯಕ್ಷರು, ವೈದಿಕರು, ಆಡಳಿತ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

About the author

Adyot

Leave a Comment