ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಇದೇ ಪ್ರಥಮಬಾರಿಗೆ ಆಯೋಜಿಸಲಾಗಿದ್ದ ಬೆಳಗಾವಿ ವಿಭಾಗ ಮಟ್ಟದ ಪ್ರಾಥಮಿಕ ಮತ್ತು ಪ್ರೌಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಯನ್ನು ಭಾರಿ ಮಳೆಯ ನಡುವೆ ವಿಜೃಂಭಣೆಯಿಂದ ಉದ್ಘಾಟಿಸಲಾಯಿತು
ಪಂದ್ಯಾವಳಿ ಉದ್ಘಾಟಿಸಿದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ,ಕ್ರೀಡೆ ಮಕ್ಕಳಲ್ಲಿ ದೈಹಿಕ ಶಕ್ತಿಯನ್ನು ತುಂಬುವುದರೊAದಿಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ.ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಪಾಲಕರು ಮಕ್ಕಳಿಗೆ ಪ್ರೋತ್ಸಾಹಿಸಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಶಿಕ್ಷಣದಷ್ಟೇ ಅಗತ್ಯ. ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪಲು ಕ್ರೀಡೆ ಸ್ಪೂರ್ತಿಯನ್ನು ನೀಡುತ್ತದೆ. ಶಿಕ್ಷಣ ಪ್ರೇಮಿ ಅಜೀಂ ಪ್ರೇಂಜಿ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಉದ್ದೇಶದಿಂದ ಅಪಾರ ಸಹಾಯ ಮಾಡಿದ್ದಾರೆ. ಅವರ ಸಹಾಯವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದರು.
ಪಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಪಪಂ ಉಪಾಧ್ಯಕ್ಷ ವಿನಯ ಎಸ್ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ನಾಯ್ಕ, ತಾಲ್ಲೂಕು ಪಂಚಾಯಿತಿ ಇಒ ದೇವರಾಜ ಹಿತ್ತಲಕೊಪ್ಪ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಹೆಗಡೆ, ಕೆ ಜಿ ನಾಗರಾಜ, ವಿವಿಧ ಜಿಲ್ಲೆಗಳ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಎಚ್ ನಾಯ್ಕ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರನ್ನೂ ಸ್ಮರಿಸಿದರು.ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಬಸವರಾಜ ಪಿ ಸ್ವಾಗತಿಸಿದರು.
ನಾಗರಾಜ ಮೊಗೇರ ನಿರೂಪಿಸಿದರು. ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ್ ವಂದಿಸಿದರು. ಯಕ್ಷ ಗೆಜ್ಜೆ ಶಿರಸಿಯ ವಿದ್ಯಾರ್ಥಿನಿಯರಾದ ಮಹಿಮಾ ಮತ್ತು ರಚನಾ ಯಕ್ಷ ನೃತ್ಯ ಪ್ರದರ್ಶಿಸಿದರು.