ಆದ್ಯೋತ್ ಸುದ್ದಿನಿಧಿ
ಎಸ್.ಎಸ್.ಎಲ್.ಸಿ ಪ್ರಶ್ನೆ ಪತ್ರಿಕೆ ರಚನೆ ಮಾಡುವಾಗ ವಿಷಯವಾರು ಶಿಕ್ಷಕರ ಅಭಿಪ್ರಾಯಗಳಿಗೆ ಸಂಪೂರ್ಣ ಅವಕಾಶ ನೀಡಬೇಕೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಅಖಿಲ ಭಾರತ ಶಿಕ್ಷಕರ ಪೆಡರೇಷನಕಾರ್ಯಾಧ್ಯಕ್ಷ ಬಸವರಾಜ ಗುರಿಕಾರ ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಏಕರೂಪವಾಗಿರುವದಿಲ್ಲಾ, ಪ್ರತಿ ವಿದ್ಯಾರ್ಥಿಗೂ ಬಿನ್ನವಾಗಿರುತ್ತದೆ. ಕಲಿಕಾ ಸಾಮರ್ಥ್ಯ ಹೆಚ್ಚು ಇರುವ ವಿದ್ಯಾರ್ಥಿಗಳು, ಸಾದಾರಣ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳು ಹಾಗೂ ಕನಿಷ್ಠ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳು ಇರುತ್ತಾರೆ. ಎಸ್.ಎಸ್.ಎಲ್.ಸಿ ಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸುವಾಗ ವಿಭಿನ್ನ ಕಲಿಕಾ ಸಾಮರ್ಥ್ಯ ಇರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟು ಕೊಂಡು ಕನಿಷ್ಠ ಕಲಿಕಾ ಸಾಮರ್ಥ್ಯ ಹೊಂದಿರುವ ವಿದ್ಯಾರ್ಥಿಗಳಿಗೂ ಸಹ ಅನಕೂಲವಾಗುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಬೇಕು ಇದರ ಜೊತೆಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬೋಧನ ವ್ಯವಸ್ಥೆಯನ್ನು ಸಹ ಪರಿಗಣಿಸಬೇಕು ಪ್ರಶ್ನೆ ಪತ್ರಿಕೆ ತಯಾರಿಸುವಾಗ ಬೌಗೋಳಿಕವಾಗಿ ಶಿಕ್ಷಕರುಗಳಿಗೆ ಅವಕಾಶ ಕಲ್ಪಿಸಬೇಕು ಪ್ರಶ್ನೆ ಪತ್ರಿಕೆ ತಯಾರಿಕೆಯಲ್ಲಿ ಶಿಕ್ಷಕರುಗಳ ನಿರ್ಣಯ ಅಂತಿಮವಾಗಿರಬೇಕು ರೂಪನಾತ್ಮಕ ಮೌಲ್ಯ ಮಾಪನದ ಆಂತರಿಕ ಅಂಕಗಳನ್ನು ಉತ್ತಿರ್ಣತೆಗೆ ಪರಿಗಣಿಸಬೇಕು ಈ ಕುರಿತು ಮಾನ್ಯ ನಿರ್ದೇಶಕರು ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಆದೇಶ ನೀಡಲು ಮನವಿಯಲ್ಲಿ ವಿನಂತಿಸಲಾಗಿದೆ.