ಆದ್ಯೋತ್ ಸುದ್ದಿನಿಧಿ
ಕಾರವಾರದ ಠಾಗೂರು ಕಡಲತೀರದ ಸಮೀಪದಲ್ಲಿ ಗಾಯಗೊಂಡು ನಿತ್ರಾಣ ಸ್ಥಿತಿಯಲ್ಲಿರುವ ಸೀಗಲ್ ಹಕ್ಕಿ ಕಂಡುಬಂದಿದೆ

ವಿಶೇಷವೆಂದರೆ ಈ ಹಕ್ಕಿಯ ಬೆನ್ನಿನಲ್ಲಿದ್ದ ಜಿಪಿಎಸ್ ನಲ್ಲಿ ಚೈನೀಸ್ ವಿಜ್ಞಾನ ಅಕಾಡೆಮಿಯ ರಿಸರ್ಚ್ ಸೆಂಟರ್ ಫಾರ್ ಇಕೋ-ಎನ್ವಿರಾನ್ಮೆಂಟಲ್ ಸೈನ್ಸ್ ವಿಳಾಸವಿದೆ.


ಸೀಗಲ್ ಹಕ್ಕಿಗಳ ಚಲನ ವಲನ, ಆಹಾರ ಹಾಗೂ ವಲಸೆಯನ್ನು ಗುರುತಿಸಲು ಜಿಪಿಎಸ್ ಟ್ರ್ಯಾಕರ್ ಬಳಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯ ಅಧಿಕಾರಿಗಳು ಅಕಾಡೆಮಿಯ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದು, ಹಕ್ಕಿಯನ್ನು ಮರೈನ್ ಅರಣ್ಯ ವಿಭಾಗದ ಕಚೇರಿಯಲ್ಲಿ ಇರಿಸಲಾಗಿದೆ.
