ಸಿದ್ದಾಪುರ:ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನಿಂದ ಹೊಲಿಗೆ ತರಬೇತಿ ಶಿಬಿರ

ಆದ್ಯೊತ್ ಸುದ್ದಿನಿಧಿ:
ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಕುಚಗುಂಡಿಯ ಕಲ್ಯಾಣೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹಾಗೂ ತಾರೇಸರದ ಸಭಾಭವನದಲ್ಲಿ ಉಚಿತ ಹೊಲಿಗೆ ತರಬೇತಿ ಶಿಬಿರಕ್ಕೆ ಸೋಮವಾರ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅನಂತಮೂರ್ತಿ ಹೆಗಡೆ, ಮಹಿಳೆಯರು ಸ್ವಾವಲಂಬಿಯಾಗಲು ಆರ್ಥಿಕ ಸದೃಢರಾಗುವುದು ಅವಶ್ಯಕ. ಸ್ವಉದ್ಯೋಗವನ್ನು ಮಾಡುವ ಮೂಲಕ ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಸಾಧ್ಯ. ಈ ಉದ್ದೇಶದಿಂದ ಗ್ರಾಮೀಣ ಭಾಗದಲ್ಲಿ ಉಚಿತ ಹೊಲಿಗೆ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೊಲಿಗೆ ತರಬೇತಿ ಪಡೆದರೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯವಿದೆ. ಬಡತನವನ್ನು ಹೋಗಲಾಡಿಸಲು ಹೊಲಿಗೆ ಉದ್ಯೋಗ ಮಹಿಳೆಯರಿಗೆ ಬಹಳ ಅನುಕೂಲವಾಗಲಿದೆ. ಹೊಲಿಗೆಯನ್ನು ಪ್ರತಿಯೊಬ್ಬ ಮಹಿಳೆಯರೂ ಕಲಿತುಕೊಳ್ಳಬೇಕು. ಮನೆಯಲ್ಲೆ ಕುಳಿತು ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದು.ತರಬೇತಿಯ ಅನುಕೂಲವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.

ಹಸ್ರಗೋಡ ಗ್ರಾಪಂ ಮಾಜಿ ಅಧ್ಯಕ್ಷ ಪ್ರದೀಪ ಹೆಗಡೆ ಕರ್ಜಗಿ ಮಾತನಾಡಿ, ಹಳ್ಳಿಗಳಲ್ಲಿನ ಮಹಿಳೆಯರಿಗೆ ಸ್ವ ಉದ್ಯೋಗ ತರಬೇತಿ ನೀಡಬೇಕು ಎಂಬ ಬಹುದೊಡ್ಡ ಕನಸು ಅನಂತಮೂರ್ತಿ ಹೆಗಡೆಯವರಲ್ಲಿತ್ತು. ಆ ಕನಸು ಇಂದು ನನಸಾಗುತ್ತಿದೆ. ಮಹಿಳೆಯರಿಗೆ ಸ್ವ ಉದ್ಯೋಗದಿಂದ ಕುಟುಂಬ ನಿರ್ವಹಣೆ ಮಾಡುವ ಶಕ್ತಿ ಬರಬೇಕು ಎಂಬುದೇ ಈ ಕಾರ್ಯಕ್ರಮದ ಉದ್ದೇಶ ಎಂದರು .


ನಾರಾಯಣ ಹೆಗಡೆ ತಾರೇಸರ ಮಾತನಾಡಿದರು.ಈ ಸಂದರ್ಭದಲ್ಲಿ ಸುಬ್ರಾಯ ಹೆಗಡೆ ಬೇಣದಮನೆ , ಆರ್ ಜಿ ಭಟ್ ಯಲೂಗಾರ,ನಾರಾಯಣ ಹೆಗಡೆ ತಾರೇಸರ, ಗಣೇಶ ಹೆಗಡೆ ಶಮೆಮನೆ , ನವೀನ ಹೆಗಡೆ ತಾರೇಸರ,ಹೊಲಿಗೆ ತರಬೇತಿ ದಾರರಾದ ವೀಣಾ ಕೊಳಗಿಬೀಸ್, ಆಶಾ ಶಿರಸಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About the author

Adyot

Leave a Comment