ಸ್ಪೀಕರ್ ಕಾಗೇರಿಯಿಂದ ಅಂಗನವಾಡಿ ಕಟ್ಟಡಕ್ಕೆ ಶಂಖುಸ್ಥಾಪನೆ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಲಕೊಪ್ಪದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಂಗನವಾಡಿ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಅಭಿವೃದ್ಧಿ ಕುಂಟಿತವಾಗಿತ್ತು. ಆಗ ಪ್ರತಿ ವರ್ಷ ಒಂದು ಕೋಟಿ ರೂಪಾಯಿ ಕೊಟ್ಟಿದ್ದರು. ಇದರಿಂದ ಅಭಿವೃದ್ಧಿ ಸಾಧ್ಯವಾಗುತ್ತಿರಲಿಲ್ಲ. ಆದರೆ ಈಗ ಯಡಿಯೂರಪ್ಪ ಸರಕಾರ ಬಂದ ಮೇಲೆ ಹೆಚ್ಚಿನ ಅನುದಾನ ನೀಡುತ್ತಿದ್ದಾರೆ. ಇದರಿಂದ ಅಭಿವೃದ್ಧಿ ವೇಗ ಪಡೆದುಕೊಂಡಿದೆ. ಅಭಿವೃದ್ಧಿ ಕೆಲಸದಲ್ಲಿ ನಾವಿದ್ದೇವೆ. ಮೂಲಭೂತ ಸಮಸ್ಯೆ ಬಹಳಷ್ಟಿರುವುದರಿಂದ ಸಾಕಷ್ಟು ಅನುದಾನದ ಅವಶ್ಯಕತೆ ಇದೆ. ಸರಕಾರಕ್ಕೆ, ಸಚಿವರಿಗೆ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಲು ಸೂಚನೆ ನೀಡುತ್ತೇನೆ ಎಂದರು.

About the author

Adyot

Leave a Comment