ಬನವಾಸಿ : ಮಯೂರವರ್ಮನ ನಾಡು, ಕದಂಬರ ಬೀಡು ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಕದಂಬೋತ್ಸವದ ಉದ್ಘಾಟನೆ ನಡೆಯಿತು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಷ್ಟ್ರಪ್ರಸಿದ್ಧ ಕದಂಬೋತ್ಸವಕ್ಕೆ ಚಾಲನೆ ನೀಡಿದರು. ಜಿಲ್ಲೆಯ ಹಾಗೂ ಹೊರಜಿಲ್ಲೆಯ ಅನೇಕ ಕಡೆ ಸಂಚರಿಸಿ ವೇದಿಕೆಗೆ ಬಂದ ಕದಂಬ ಜ್ಯೋತಿಯ ಮೂಲಕ ಕದಂಬೋತ್ಸವದ ಉದ್ಘಾಟನೆ ಮಾಡಲಾಯಿತು. ಸಿಎಂ ಯಡಿಯೂರಪ್ಪ ಗೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ನೂತನ ಸಚಿವ ಶಿವರಾಮ್ ಹೆಬ್ಬಾರ್, ಪಂಪ ಪ್ರಶಸ್ತಿ ಪುರಸ್ಕೃತ ಸಿದ್ದಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿ ಎಂ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಸಾಥ್ ನೀಡಿದರು. ಕದಂಬೋತ್ಸವವು 2 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ.
ಕನ್ನಡ ನಾಡಿನ ಐತಿಹಾಸಿಕ, ಸಾಂಸ್ಕೃತಿಕ ಪರಂಪರೆಯ ವೈಭವದ ಪ್ರತೀಕ
ಕದಂಬೋತ್ಸವ ಕಾರ್ಯಕ್ರಮ. ಶುಭಾಶಯಗಳು.