ಹಿರಿಯ ಸಾಹಿತಿ, ನಾಡೋಜ ಡಾ.ಪಾಟೀಲ್ ಪುಟ್ಟಪ್ಪ ವಿಧಿವಶ

ಆದ್ಯೋತ್ ನ್ಯೂಸ್ ಡೆಸ್ಕ್ : ಹಿರಿಯ ಸಾಹಿತಿ, ನಾಡೋಜ ಡಾ. ಪಾಟೀಲ್ ಪುಟ್ಟಪ್ಪ ಇನ್ನು ನೆನಪು ಮಾತ್ರ. ಹಲವು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾಟೀಲ್ ಪುಟ್ಟಪ್ಪ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.


ಉಸಿರಾಟದ ತೊಂದರೆ, ವಿಪರೀತ ಜ್ವರದಿಂದಾಗಿ ಮೂರು ದಿನಗಳ ಹಿಂದೆ ಪ್ರಜ್ಞೆ ತಪ್ಪಿದ್ದ ಪಾಟೀಲ್ ಪುಟ್ಟಪ್ಪ ಅವರಿಗೆ ತೀವ್ರ ನಿಗಾಘಟಕದಲ್ಲಿ ಹಲವು ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಕೆಲವು ದಿನಗಳ ಹಿಂದೆ ಬಿದ್ದು ತಲೆಗೆ ಪೆಟ್ಟಾಗಿದ್ದ ಕಾರಣ ತಲೆಯಲ್ಲಿ ರಕ್ತ ಸ್ರಾವದಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿತ್ತು. 102 ವರ್ಷ ವಯಸ್ಸಿನ ಪಾಟೀಲ್ ಪುಟ್ಟಪ್ಪ ನಿಧನರಾದರು. ನಿನ್ನೆಯಷ್ಟೇ ರಾಷ್ಟ್ರೀಯ ಬಸವ ಪ್ರಶಸ್ತಿ ಇವರಿಗೆ ಘೋಷಣೆಯಾಗಿದ್ದು, ನಾಳೆ ಪ್ರಶಸ್ತಿ ವಿತರಣಾ ಸಮಾರಂಭವನ್ನ ಕೂಡ ಹಮ್ಮಿಕೊಳ್ಳಲಾಗಿತ್ತು. ಪಾಟೀಲ್ ಪುಟ್ಟಪ್ಪ ಅವರ ನಿಧನದಿಂದಾಗಿ ಸಾಹಿತ್ಯ ಲೋಕದ ಒಂದು ಕೊಂಡಿ ಕಳಚಿದಂತಾಗಿದೆ.

About the author

Adyot

Leave a Comment