ಕೊರೊನಾ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಮನೆ ಮನೆ ಸಮೀಕ್ಷೆ

ಆದ್ಯೋತ್ ನ್ಯೂಸ್ ಡೆಸ್ಕ್ : ಕೊರೊನಾ ವೈರಸ್ ಹರಡುವಿಕೆ ತಡೆ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಮನೆ ಮನೆ ಸಮೀಕ್ಷೆ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ ಅಂತ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಪ್ರತಿ ಮನೆಯಲ್ಲಿ ಜ್ವರದಿಂದ ಬಳಲುತ್ತಿರುವವರು ಮತ್ತು ಇತರೆ ಅನಾರೋಗ್ಯಕ್ಕೆ ಒಳಗಾಗಿರುವವರು, ಸದ್ಯದಲ್ಲಿ ವಿದೇಶ ಪ್ರವಾಸ ಮಾಡಿ ಬಂದವರು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬಂದವರ ಮಾಹಿತಿಯನ್ನು ಕಲೆಹಾಕಲಾಗುತ್ತದೆ. ಈ ಕ್ರಮದಿಂದ ಜಿಲ್ಲೆಯಲ್ಲಿ ಕೊರೊನಾ ಹರಡುವಿಕೆಯ ಪ್ರಮಾಣವನ್ನು ನಿಖರವಾಗಿ ಅರಿಯಲು ಸಾಧ್ಯವಾಗುತ್ತದೆ. ಜ್ವರದಿಂದ ಬಳಲುತ್ತಿರುವವರಿಗೆ ಕೂಡಲೇ ಹತ್ತಿರದ ಆಸ್ಪತ್ರೆಗಳಲ್ಲಿ ಆರೋಗ್ಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವಿದೇಶದಿಂದ, ಹೊರ ರಾಜ್ಯದಿಂದ ಮತ್ತು ಹೊರ ಜಿಲ್ಲೆಯಿಂದ ಬಂದವರನ್ನು ಸಹ ಪ್ರತಿ ದಿನ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತದೆ. ಈ ಸರ್ವೆ ಕಾರ್ಯಕ್ಕೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ ತಿಳಿಸಿದರು.

About the author

Adyot

1 Comment

Leave a Comment