ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಶಿರಸಿ ನಗರಸಭೆ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದಾನೆಂಬ ದೂರು ದಾಖಲಾಗಿದ್ದು ಪೊಲೀಸ್ ರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.
ಶಿರಸಿ ನಗರಸಭೆಯ ಸದಸ್ಯ ಯಶವಂತ ಹನುಮಂತಪ್ಪ ಮರಾಠಿ(43) ಆರೋಪಿಯಾಗಿದ್ದು ಬಾಲಕಿಯನ್ನು ಪ್ರೀತಿ ಮಾಡಿ ಮದುವೆಯಾಗುತ್ತೇನೆ ಎಂದು ನಂಬಿಸಿ ನಿರಂತರ ಅತ್ಯಾಚಾರ ಎಸಗುತ್ತಿದ್ದ ಎಂದು ಆರೋಪಿಸಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು ಪೊಲೀಸ್ ರು ತೀವ್ರ ತನಿಖೆ ನಡೆಸುತ್ತಿದ್ದಾರೆ.
😲😞