ಕ್ರೀಡಾಂಗಣ ನಿರ್ಮಾಣ ಘೋಷಣೆಗೆ ಸ್ವಾಗತ

ಆದ್ಯೋತ್ ಸುದ್ದಿನಿಧಿ:
ಜಿಲ್ಲಾ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವುದನ್ನು ಶಾಸಕಿ ರೂಪಾಲಿ ಎಸ್.ನಾಯ್ಕ,ಸ್ವಾಗತಿಸಿರುವುದಲ್ಲದೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಜಿಲ್ಲಾ ಕೇಂದ್ರವಾದ ಕಾರವಾರದಲ್ಲಿ ಸುಸಜ್ಜಿತ ಕ್ರೀಡಾಂಗಣದ ಅವಶ್ಯಕತೆ ಇದೆ. ಇದು ಜಿಲ್ಲೆಯ ಮತ್ತು ಕಾರವಾರ -ಅಂಕೋಲಾ ವಿಧಾನಸಭೆ ಕ್ಷೇತ್ರದಲ್ಲಿ ಕ್ರೀಡೆ, ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆ ಅಭಿವೃದ್ಧಿಗೆ ಕಾರಣವಾಗಲಿದೆ. ಉದ್ಯೋಗಾವಕಾಶವೂ ಲಭಿಸಲಿದೆ.
ಆದರೆ ಉದ್ದೇಶಿತ ಸ್ಥಳದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳೀಯರ ಆಕ್ಷೇಪ ಕೇಳಿಬಂದಿದೆ. ಕಾರಣ ಸ್ಥಳೀಯ ಜನತೆಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಜನತೆಗೆ ತೊಂದರೆ ಉಂಟಾಗದಂತೆ ಸೂಕ್ತ ಸ್ಥಳದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಆಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಸ್ಥಳ ನಿರ್ಧರಿಸಲಾಗುವುದು. ಕ್ರೀಡಾಂಗಣ ನಿರ್ಮಾಣ ಆಗಲೇಬೇಕು. ಇದಕ್ಕೆ ತಮ್ಮ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿರುವ ಶಾಸಕರು, ಕ್ರೀಡಾಂಗಣ ನಿರ್ಮಾಣದ ಬಗ್ಗೆ ಪ್ರಯತ್ನ ನಡೆಸುತ್ತಿರುವ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಸಂಸದ ಅನಂತಕುಮಾರ್ ಹೆಗಡೆ ಯವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

About the author

Adyot

Leave a Comment