ಆದ್ಯೋತ್ ಸುದ್ದಿನಿಧಿ :
ಭಾರತೀಯ ಜನತಾಪಕ್ಷ ತನ್ನ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಹಳೆಯ ಮುಖಗಳಿಗೆ ಕೋಕ್ ನೀಡಲಾಗಿದ್ದು, ರಾಜ್ಯದ 3 ಜನರು
ನೂತನ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಸಚಿವ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ ರವಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಇನ್ನು ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿ ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಿಸಿದ್ದ ತೇಜಸ್ವಿ ಸೂರ್ಯ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಜೆಯಾಗಿದ್ದರೆ, ಇನ್ನೊಬ್ಬ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ಘೋಷಿಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ.
**********************************
**********************************
**********************************