ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿಯಾಗಿ
ಕಾರವಾರ ಮೆಡಿಕಲ್ ಕಾಲೇಜಿನ ಆಸ್ಪತ್ರೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲು ಆಗಮಿಸುವಂತೆ ವಿನಂತಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ದೀಪಾವಳಿ ಹಬ್ಬದ ತರುವಾಯ ಕಾರವಾರಕ್ಕೆ ಆಗಮಿಸಿ 450 ಹಾಸಿಗೆ ಸಾಮರ್ಥಯದ ಆಸ್ಪತ್ರೆಗೆ ಶಿಲಾನ್ಯಾಸ ನೆರವೇರಿಸುವುದಾಗಿ ಭರವಸೆ ನೀಡಿದರು.
ಈ ಹಿಂದೆ ಮೆಡಿಕಲ್ ಕಾಲೇಜಿನಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ವಿನಂತಿಸಿದಾಗ ಮುಖ್ಯಮಂತ್ರಿಗಳು 160 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಆದೇಶಿಸಿದ್ದರು.
ಇದೇ ಸಂದರ್ಭದಲ್ಲಿ ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬಗ್ಗೆ ರೂಪಾಲಿ ನಾಯ್ಕ ಮುಖ್ಯಮಂತ್ರಿ ಅವರಲ್ಲಿ ಚರ್ಚೆ ನಡೆಸಿದರು.
ಕಾರವಾರ ನಗರಸಭೆ ಹಾಗೂ ಅಂಕೋಲಾ ಪುರಸಭೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಗ್ಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಕೊರೋನಾ ನಿಯಂತ್ರಣದ ಬಗ್ಗೆ ಮಾಹಿತಿ
ಪಡೆದರು.