ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಚಿವ ಶಿವರಾಮ ಹೆಬ್ಬಾರ ಹಾಗೂ ಉಪಾಧ್ಯಕ್ಷರಾಗಿ ಸಹಕಾರಿ
ಭಾರತೀ ಅಧ್ಯಕ್ಷ ಮೋಹನದಾಸ್ ನಾಯಕ ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಸಂಘಟನೆಯವರು ಅಧಿಕಾರದ ಚುಕ್ಕಾಣಿ ಹಿಡಿದಂತಾಗಿದೆ.
ಪ್ರತಿಷ್ಠಿತ ಕಣವಾಗಿದ್ದ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕೊನೆಗೂ ಶಿವರಾಮ ಹೆಬ್ಬಾರ ಅಧ್ಯಕ್ಷರಾಗಿದ್ದಾರೆ.ನಿಕಟಪೂರ್ವ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ್ ಶಿವರಾಮ ಹೆಬ್ಬಾರಗೆ ಬೆಂಬಲ ನೀಡಿದ್ದರಿಂದ ಅವಿರೋಧ ಆಯ್ಕೆಗೆ ಅನುಕೂಲವಾಯಿತು ಎನ್ನಲಾಗಿದೆ.