ಆದ್ಯೋತ್ ಸುದ್ದಿನಿಧಿ:
ಮಣಿಪಾಲ ಆರೋಗ್ಯ ಕಾರ್ಡ್ 2020ರ ನೋಂದಣಿಯನ್ನು
ಸಾರ್ವಜನಿಕರ ಬೇಡಿಕೆಯ ಕಾರಣ ನವಂಬರ-30ರ ವರೆಗೆ ವಿಸ್ತರಣೆ ಮಾಡಲಾಗಿದೆ.
ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಈ ಬಗ್ಗೆ ಪ್ರಕಟಣೆ ನೀಡಿದ್ದು
20ನೇ ವರ್ಷದ ಅಂಗವಾಗಿ ನಾವು ಕಾರ್ಡ್‌ಗಳನ್ನು ಸುಲಭವಾಗಿ ನೋಂದಾಯಿಸಲು, ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಪರಿಚಯಿಸಿದ್ದೇವೆ ಮತ್ತು ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಮತ್ತು ಸ್ಮಾರ್ಟ್ ಕಾರ್ಡನ್ನು ತಮ್ಮ ಪೋಕೆಟಗಳಲ್ಲಿ ಇಟ್ಟುಕೊಳ್ಳಬಹುದು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ ಎಂದು ಹೇಳಿದ್ದಾರೆ.
20ನೇ ವರ್ಷದ ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯು, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯ ಜೊತೆಗೆ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 400/-, ಕುಟುಂಬಕ್ಕೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದು ತಿಳಿಸಿದ್ದಾರೆ.
ಮಣಿಪಾಲ ಆರೋಗ್ಯ ಕಾರ್ಡ್ ನ್ನು ಉಪಯೋಗಿಸಿ, ಈ ಕೆಳಕಂಡ ಸೌಲಭ್ಯಗಳನ್ನು ಪಡೆಯಬಹುದು:
ವೈದ್ಯರ ಸಮಾಲೋಚನೆ 50% ರಿಯಾಯಿತಿ,ಪ್ರಯೋಗಾಲಯ ಪರೀಕ್ಷೆ 30% ರಿಯಾಯಿತಿ,ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ 25% ರಿಯಾಯಿತಿ,ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್, 20% ರಿಯಾಯಿತಿ,ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ 20% ರಿಯಾಯಿತಿ
ಔಷಧಾಲಯಗಳಲ್ಲಿ 12%ರವರೆಗೆ ರಿಯಾಯಿತಿ ಇರುತ್ತದೆ.
2020ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಸೈಂಟ್ ಮಿಲಾಗ್ರೇಸ್ : 9538200104 ಮತ್ತು ಸೈಂಟ್ ಮಿಲಾಗ್ರೇಸ್ ಸೌಹಾರ್ದದ ಎಲ್ಲಾ ಶಾಖೆಗಳು: 08382223600
ಮಣಿಪಾಲ ಆರೋಗ್ಯ ಕಾರ್ಡಿನ ಹೆಚ್ಚಿನ ಮಾಹಿತಿಗಾಗಿ www.khmanipal.comಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.