ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಮಾಸ್ತಿಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ರವಿವಾರ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವಮಹಿಳೆ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಧಾರವಾಡ ಮೂಲದ ರೇಖಾ ಎಂಬುವವರು ಮೃತಪಟ್ಟವರು ಧಾರವಾಡ ಮೂಲದ ಮೇಘಾ ಸಿಂಘನಾಥ, ಯು.ಬಿ.ಮೇಸ್ತ್ರಿ, ಮನ್ಸೂರ್ ಮುಲ್ಲಾ ಎಂಬುವವರಿಗೆ ತೀವ್ರಸ್ವರೂಪದ ಗಾಯಗಳಾಗಿದ್ದು ಅಂಕೋಲಾ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಕಾರವಾರ ಕಿಮ್ಸಗೆ ದಾಖಲಿಸಲಾಗಿದ್ದು. ಬಳಿಕ ಅಲ್ಲಿಂದ ದಾರವಾಡಕ್ಕೆ ಕರೆದೊಯ್ಯಲಾಗಿದೆ.
ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು ಇವರೆಲ್ಲ ಧಾರವಾಡ ಕೃಷಿವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಅಂಕೋಲಾದಿಂದ ಹುಬ್ಬಳ್ಳಿಗೆ ಹೊರಟಿದ್ದ ಕಾರು,ಗದಗದಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರವಾರಕ್ಕೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ನಡೆದಿದೆ. ಕಾರು ಚಾಲಕನ ಅಜಾಗರುಕತೆ ಚಾಲನೆ ಈ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಸಿಪಿಐ ಕೃಷ್ಣಾನಂದ ನಾಯಕ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.