ಆದ್ಯೋತ್ ಸುದ್ದಿನಿಧಿ:
ಈಗಷ್ಟೆ ಮುಕ್ತಾಯಡಿರುವ ಲೋಕಸಭಾ ಹಾಗೂ ರಾಜ್ಯಸಭಾ ಅಧಿವೇಶನದಲ್ಲಿ ವಿರೋಧಪಕ್ಷಗಳು ನಡೆಸಿರುವ ದುಂಡಾವರ್ತನೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಖಂಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಗೇರಿಯವರು,ಅಗಷ್ಟ್ 10 ರಂದು ರಾಜ್ಯಸಭೆಯಲ್ಲಿ ನಡೆದ ಅಹಿತಕರ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪುಚುಕ್ಕೆಯಾಗಿದೆ. ಇದರಿಂದಾಗಿ ಇಡೀ ವ್ಯವಸ್ಥೆ ತಲೆತಗ್ಗಿಸುವಂತಾಗಿದೆ. ಯಾವ ರಾಜ್ಯಸಭೆ ದೇಶದ ಸಂವಿಧಾನ ವ್ಯವಸ್ಥೆಗೆ ಮಾದರಿಯಾಗಿರಬೇಕಾಗಿತ್ತೋ ಅದೇ ರಾಜ್ಯಸಭೆಯಲ್ಲಿ ನಡೆದಿರುವ ಗದ್ದಲ, ತಳ್ಳಾಟ, ಮಸೂದೆಗಳ ಪ್ರತಿಗಳನ್ನು ಹರಿದುಹಾಕಿರುವುದು ತುಂಬಾ ಖೇಧಕರ ಪ್ರಸಂಗವಾಗಿದೆ. ಪ್ರಜಾಪ್ರಭುತ್ವದ ದೇಗುಲದಲ್ಲಿ ನಡೆದಿರುವ ಇಂತಹ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ದುರ್ವರ್ತನೆಗೆ ಕಾರಣರಾದವರ ಮೇಲೆ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಲೋಕಸಭಾ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಭಾಪತಿಯವರಲ್ಲಿ ವಿನಂತಿಸುತ್ತೇನೆ ಎಂದು ಹೇಳಿದರು.