ಆದ್ಯೋತ್ ಸುದ್ದಿನಿಧಿ:
ಶಿರಸಿಯಲ್ಲಿ ನೂತನ ಕಾರ್ಮಿಕ ವಿಮಾ ಚಿಕಿತ್ಸಾಲಯವನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ,
ವಿಸ್ತಾರವಾಗಿ ಬೆಳೆಯುತ್ತಿರುವ ಶಿರಸಿಯನ್ನು ಕೇಂದ್ರವಾಗಿರಿಸಿ ಶಿರಸಿ ಜಿಲ್ಲೆ ಮಾಡಬೇಕು ಎಂದು ಸಾಕಷ್ಟು ಬೇಡಿಕೆ ಬಂದಿದೆ ಇದು ಸೂಕ್ತವೂ ಆಗಿದೆ.ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಉಡುಪಿ ಜಿಲ್ಲೆ ಈಗಾಗಲೇ ಆಗಿದ್ದು, ಶಿರಸಿ ಜಿಲ್ಲೆಯ ಘೋಷಣೆ ಆಗಬೇಕು ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ. ಜನರ ಭಾವನೆಗೆ ಸರಕಾರ ಸೂಕ್ತ ಕಾಲದಲ್ಲಿ ಸ್ಪಂದಿಸಿ ಸೂಕ್ತ ಬೆ
ಲೆ ಕೊಡಲಿದೆ ಎಂದು ಹೇಳಿದರು.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ,ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಕಾರ್ಮಿಕ ಇಲಾಖೆ ಆಸ್ಪತ್ರೆಯನ್ನು ಪ್ರಾರಂಭಿಸುತ್ತಿದೆ.ಇಲಾಖೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡದೇ ಬೇರೆ ಕಡೆ ಚಿಕಿತ್ಸೆಗೆ ಶಿಫಾರಸ್ಸು ಮಾಡುವ ಮಾಫಿಯಾ ವಿರುದ್ಧ ಕೂಡ ಎಚ್ಚರಿಕೆ ವಹಿಸುತ್ತಿದ್ದೇವೆ ಎಂದರು.
ಟಿಎಸ್ ಎಸ್ ಅಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ನಂದನ್ ಸಾಗರ, ಎಸಿ ದೇವರಾಜ ಉಪಸ್ಥಿತರಿದ್ದರು.