ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ
ನಿರ್ಮಾಣದ ಕುರಿತಾಗಿ ಆರೋಗ್ಯ ಸಚೀವ ಡಾ.ಕೆ.ಸುಧಾಕರ ಜಿಲ್ಲೆಯ ಸಚೀವರು,ಶಾಸಕರ ಸಭೆಯನ್ನು ಮಂಗಳವಾರ ಬೆಂಗಳೂರಿನಲ್ಲಿ ನಡೆಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಕಾರ್ಮಿಕ ಸಚೀವ ಶಿವರಾಮ ಹೆಬ್ಬಾರ
ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯತೆಯ ಬಗ್ಗೆ ವಿಸ್ತೃತವಾಗಿ ವಿವರಿಸಿದರು ಹಾಗೂ ಜಿಲ್ಲೆಯಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ ಖಾಸಗಿ ಸಹಭಾಗಿತ್ವದಲ್ಲಿ ಶೀಘ್ರದಲ್ಲೇ ಆಸ್ಪತ್ರೆಯ ನಿರ್ಮಾಣ ಬಗ್ಗೆ ಆರೋಗ್ಯ ಸಚಿವರು ಜಿಲ್ಲೆಗೆ ಆಗಮಿಸಿ ಘೋಷಣೆ ಮಾಡುವಂತೆ ಮತ್ತು ಜಿಲ್ಲೆಯ ಎಲ್ಲಾ ತಾಲೂಕಿನ ಸರಕಾರಿ ಆಸ್ಪತ್ರೆಗಳಿಗೆ ತಜ್ಞ ವೈದ್ಯರು ಮತ್ತು ಅಗತ್ಯವಿರುವ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಮಂಜೂರು ಮಾಡುವಂತ ಮನವಿ ಮಾಡಿದರು.
ಡಾ.ಕೆ ಸುಧಾಕರ ಮಾತನಾಡಿ, ಉತ್ತರ ಕನ್ನಡ ಜಿಲ್ಲೆಯ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಮಾಡುವ ಬಗ್ಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಎಲ್ಲಾ ಪ್ರಯತ್ನಗಳು ಸಾಗುತ್ತಿದೆ, ಸಚಿವ ಶಿವರಾಮ ಹೆಬ್ಬಾರ್ ನೀಡಿರುವ ಸಲಹೆಯಂತೆ ಖಾಸಗಿಯವರ ಸಹಭಾಗಿತ್ವದಲ್ಲಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುವುದು. ಈಗಾಗಲೇ ಕುಮಟಾದಲ್ಲಿ ಸ್ಥಳವನ್ನು ಗುರುತಿಸಲಾಗಿದೆ ಅಧಿವೇಶನ ಮುಗಿದ ನಂತರದಲ್ಲಿ ಜಿಲ್ಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಆಸ್ಪತ್ರೆಯ ನಿರ್ಮಾಣ ಬಗ್ಗೆ ಘೋಷಣೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ದಿನಕರ ಕೆ ಶೆಟ್ಟಿ,ರೂಪಾಲಿ ನಾಯ್ಕ, ವಿಧಾನಪರಿಷತ ಸದಸ್ಯ ಗಣಪತಿ ಉಳ್ವೇಕರ್, ಶಾಂತಾರಾಮ ಸಿದ್ದಿ ಭಾಗವಹಿಸಿದ್ದರು.