ಸಿದ್ದಾಪುರ ಶಿಕ್ಷಕಿಯರಿಗೆ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಬಹುಮಾನ

ಆದ್ಯೋತ್ ಸುದ್ದಿನಿಧಿ:
ಸಿದ್ದಾಪುರದ ಇಬ್ಬರು ಶಿಕ್ಷಕಿಯರಿಗೆ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರು ಧಾರವಾಡದಲ್ಲಿ ನಡೆಸಿದ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದಾರೆ.

ಹಣಜೀಬೈಲ್ ಪ್ರಾಥಮಿಕ ಶಾಲೆಯ ಸುಮಾ ಹೆಗಡೆ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.


ಕಸ್ತೂರು ಕವಲಕೊಪ್ಪ ಶಾಲೆಯ ರೂಪಾ ಪೈ ಆಶು ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ‌.
ಇವರಿಬ್ಬರ ಸಾಧನೆಗೆ ಸಿದ್ದಾಪುರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಿ.ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯಕುಮಾರ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ ಹೆಗಡೆ,ಕಾರ್ಯದರ್ಶಿ ಗುರುರಾಜ ನಾಯ್ಕ
ಅಭಿನಂದನೆ ಸಲ್ಲಿಸಿದ್ದಾರೆ

About the author

Adyot

Leave a Comment