ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಕುಮಟಾ ಹಿರೇಗುತ್ತಿಯ ಸಮೀಪ ಕಾರು- ಟ್ಯಾಂಕರ್ ಡಿಕ್ಕಿಯಾಗಿದ್ದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಗಣಪಯ್ಯ ಗೌಡ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದೆ.
ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂಕೋಲದಿಂದ ಹೊನ್ನಾವರಕ್ಕೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಇವರ ಜೊತೆ ಪ್ರಯಾಣಿಸುತ್ತಿದ್ದ ವಿ ಎಂ ಭಂಡಾರಿ, ಪರವೇಶ್ವರ ನಾಯ್ಕ ಕೂಡ ಗಂಭೀರ ಗಾಯಗೊಂಡಿದ್ದು ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ.