ಆದ್ಯೋತ್ ಸುದ್ದಿನಿಧಿ:
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮದ ಪುಟ್ಟ ಬಾಲಕಿಯೋರ್ವಳು ತಮ್ಮ ಗ್ರಾಮಕ್ಕೆ ಸೇತುವೆ ನಿರ್ಮಾಣ ಮಾಡಿಕೊಂಡುವಂತೆ ಸಾಮಾಜಿಕ ಜಾಲತಾಣದ ಮೂಲಕವಾಗಿ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಮಾಡಿಕೊಂಡಿದ್ದಳು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಸ್ತುವಾರಿ ಸಚೀವ ಶಿವರಾಮ ಹೆಬ್ಬಾರ್ ಸ್ಥಳೀಯ ಶಾಸಕ ದಿನಕರ ಕೆ ಶೆಟ್ಟಿ ಅವರೊಂದಿಗೆ ಖುದ್ದು ಹೊಸಾಕುಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಅಹವಾಲನ್ನು ಸ್ವೀಕರಿಸಿ, ನೂತನ ಸೇತುವೆ ನಿರ್ಮಾಣದ ಕುರಿತು ಚರ್ಚಿಸಿ ಶೀಘ್ರವಾಗಿ ನೂತನ ಸೇತುವೆಯನ್ನು ನಿರ್ಮಾಣ ಮಾಡುವ ಭರವಸೆಯನ್ನು ನೀಡಿದರು, ಸಚಿವರ ಶೀಘ್ರ ಸ್ಪಂದನೆಗೆ ಗ್ರಾಮಸ್ಥರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವಿನೋದ ಪ್ರಭು, ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಚಂದ್ರಕಲಾ ಶಾಸ್ತ್ರೀ ಹಾಗೂ ಸ್ಥಳೀಯ ಮುಖಂಡರು ಹಾಗೂ ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
#######