“ನಾರಿಶಕ್ತಿ ವಂದನ್” ಅಧಿನಿಯಮ ಮಂಡನೆ ಶಿರಸಿಯಲ್ಲಿ ಸಂಭ್ರಮಾಚರಣೆ

ಆದ್ಯೋತ್ ಸುದ್ದಿನಿಧಿ:
ಪ್ರಧಾನಿ ನರೇಂದ್ರ ಮೋದಿ ಇಂದು ನೂತನ್ ಸಂಸತ್ ನಲ್ಲಿ ಮಂಡಿಸಿರುವ “ನಾರಿಶಕ್ತಿ ವಂದನ್” ಅಧಿನಿಯಮ (33% ಮಹಿಳಾ ಮೀಸಲಾತಿ) ವಿಧೇಯಕ ಮಂಡನೆಯಾದ ಪ್ರಯುಕ್ತ ಶಿರಸಿಯಲ್ಲಿ ಸಂಭ್ರಮಾಚರಣೆ ನಡೆಯಿತು.

ಬಿಜೆಪಿ ಉತ್ತರಕನ್ನಡ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ನೂತನ ಸಂಸತ್ ಭವನಕ್ಕೆ ಪ್ರವೇಶ ಮಾಡಿದ – ಶ್ರೀ ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವ ಐತಿಹಾಸಿಕ ಕೆಲಸ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹಾಗೂ ಕೇಂದ್ರ ಬಿಜೆಪಿ ಸರಕಾರದಿಂದ ಆಗಿದೆ. ಮಹಿಳಾ ಸಬಲೀಕರಣದ ನೈಜ ಪ್ರಯತ್ನ ಇದಾಗಿದ್ದು ಪ್ರಧಾನಿಯವರಿಗೆ ಧನ್ಯವಾದ ಸಲ್ಲಿಸುತ್ತೆನೆ ಎಂದು ಹೇಳಿದರು.

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಾಯ್ಕ ಮಾತನಾಡಿ, ಗ್ರಾಮ ಮಟ್ಟದಲ್ಲಿ ಮಹಿಳೆಯರಿಗೆ ಇದ್ದ ಅವಕಾಶವನ್ನು ರಾಜ್ಯ ಹಾಗೂ ದೇಶ ಮಟ್ಟದಲ್ಲಿ ಕಲ್ಪಿಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಈ ಐತಿಹಾಸಿಕ ನಿರ್ಧಾರವನ್ನು ಸ್ವಾಗತಿಸುತ್ತೇನೆ, ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಮಹಿಳಾ ಕಾರ್ಯಕರ್ತರು ನರೇಂದ್ರ ಮೋದಿ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಟಿ ಮಾಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ವಿಭಾಗ ಸಹ ಪ್ರಭಾರಿ ಎನ್ ಎಸ್ ಹೆಗಡೆ ಕರ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ಎಸಳೆ, ಗುರುಪ್ರಸಾದ ಹೆಗಡೆ ಹರ್ತೆಬೈಲ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ, ಶಿರಸಿ ನಗರ ಮಂಡಲ ಅಧ್ಯಕ್ಷ ರಾಜೇಶ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ರಾಮ ನಾಯ್ಕ, ನಗರ ಸಭೆ ಸದಸ್ಯ ಗಣಪತಿ ನಾಯ್ಕ, ಶಿರಸಿ ನಗರ ಸಭೆ ಸದಸ್ಯರು ಹಾಗೂ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಾ ಮಹಾಲಿಂಗಣ್ಣವರ್, ಪಕ್ಷದ ಪದಾಧಿಕಾರಿಗಳು ಹಾಗೂ ಮಹಿಳಾ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

About the author

Adyot

Leave a Comment